ಮೂಡಿಗೆರೆ: ನರಹಂತಕ ಕಾಡಾನೆಯನ್ನ ಸೆರೆ ಹಿಡಿಯುಲು ಆದೇಶ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ಅರಣ್ಯ ವಲಯದ ಊರುಬಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

 

ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಂದಿಲ್ವಾ?; ಈ ದಾಖಲೆಗಳನ್ನು ಇವರಿಗೆ ತಲುಪಿಸಿ; ಇನ್ನು ಕೆಲವೇ ದಿನಗಳು ಮಾತ್ರ ಬಾಕಿ

ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಬುಧವಾರ ಕಾಡಾನೆಯಿಂದ ಆನೆ ಕಾರ್ಯಪಡೆಯ ನೌಕರ ಕಾರ್ತಿಕ್ ಗೌಡ ಎಂಬುವವರನ್ನು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸಬೇಕೆಂದು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಈ ಭಾಗದ ಮೂರು ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸುವ ಭರವಸೆ ನೀಡಿದ್ದರು. ಈ ಸಂಬಂಧ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಕ್ಷೇತ್ರದ ಶಾಸಕಿ ಶ್ರೀಮತಿ ನಯನ ಮೋಟಮ್ಮ ಅವರು ಸಹ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದೀಗ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಏನಿದೆ:
ಚಿಕ್ಕಮಗಳೂರು ಅರಣ್ಯ ಉಪವಿಭಾಗದ ಮೂಡಿಗೆರೆ ವಲಯದ ಊರುಬಗೆ, ಗೌಡಹಳ್ಳಿ, ಬೈರಾಪುರ, ಹೊಸಕೆರೆ, ಮೇಕನಗದ್ದೆ ಭಾಗದಲ್ಲಿ ಸಂಚರಿಸುತ್ತಾ ಆಸ್ತಿಪಾಸ್ತಿ ಮತ್ತು ಜನರ ಜೀವ ಹಾನಿಗೆ ಕಾರಣವಾಗಿರುವ ಮೂರು ಕಾಡಾನೆಗಳನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿದು ರೆಡಿಯೋ ಕಾಲರಿಂಗ್ ಆಳವಡಿಸಿ ಭದ್ರಾ ಹುಲಿ ಸಂರಕ್ಷಿತಾ ಪ್ರದೇಶಕ್ಕೆ ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆದೇಶ ನೀಡಿದ್ದಾರೆ.

 

ಇದನ್ನೂ ಓದಿ; ರಾಜೌರಿಯಲ್ಲಿ ಗುಂಡಿನ ಕಾಳಗ; ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

ಇಂದಿನಿಂದಲೇ ಕಾರ್ಯಾಚರಣೆ :
ಊರುಬಗೆ ಭಾಗದ ಮೂರು ಕಾಡಾನೆಗಳನ್ನು ಹಿಡಿಯಲು ಇಂದಿನಿಂದಲೇ(ಶನಿವಾರ) ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ದಿಣ್ಣೇಕೆರೆ ಅಥವಾ ಹಂತೂರು ಗ್ರಾಮದಲ್ಲಿ ಸಾಕಾನೆಗಳ ಶಿಬಿರ ತೆರೆದು ಕಾರ್ಯಾಚರಣೆ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

 

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ವಿದ್ಯಾರ್ಥಿನಿ | ಬಾಲಕಿಯ ಚಿಕಿತ್ಸೆಗೆ ನೆರವು ಕೋರಿದ ಪೋಷಕರು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ (ಸ್ಪೈನಲ್ ಕಾರ್ಡ್) ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ನಡೆದಿದೆ.

ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು. ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ.

ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿದ್ದು, ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದಾರೆ.

ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದು, ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ, ಔಷಧಿಗೆ ಶೇ 50 ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.

ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋತೆರಫಿ ನೀಡುತ್ತಿದ್ದಾರೆ. ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದ್ದು, ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು. ಅಥವಾ

ದಾನಿಗಳು ಖಾತೆ ಸಂಖ್ಯೆ 0692500136635601
IFSC CODE: KARB0000069 ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.