ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಹೆಗ್ಗಾರುಕೊಡಿಗೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಶೃಂಗೇರಿ ಯೋಜನಾ ವ್ಯಾಪ್ತಿ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ಮಹಿಳಾ ಜ್ಞಾನವಿಕಾಸ ಕೇಂದ್ರಗಳು, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ನವಜೀವನ ಸಮಿತಿಗಳು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಮೆಣಸೆ ವಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ; ಸೋಲಾರ್ ಪಂಪ್ ಸೆಟ್ಗಳಿಗೆ ಅರ್ಜಿ ಆಹ್ವಾನ

ಕಾರ್ಯಕ್ರಮವು ಜನವರಿ 11, 2026 (ಭಾನುವಾರ) ರಂದು ನಡೆಯಲಿದ್ದು, ಬೆಳಿಗ್ಗೆ 7.30 ಗಂಟೆಗೆ ಪೂಜೆ ಪ್ರಾರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ, ಮಧ್ಯಾಹ್ನ 1.30 ಗಂಟೆಯಿಂದ ಅನ್ನಸಂತರ್ಪಣೆ, ಮಧ್ಯಾಹ್ನ 2 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಶ್ರೀ ಮಂಜುನಾಥ್ ಭಟ್, ಹೆಗ್ಗಾರುಕುಡಿಗೆ ಇವರ ಪೌರೊಹಿತ್ಯದಲ್ಲಿ ಪೂಜೆಯ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು. ಪೂಜಾ ಸಂಕಲ್ಪದ ವ್ರತಧಾರಿಗಳು 7 ಗಂಟೆಗೆ ಪೂಜಾ ಸ್ಥಳಕ್ಕೆ ಕಡ್ಡಾಯವಾಗಿ ಹಾಜರಿರಬೇಕು. ಹಾಗೆಯೇ ಪೂಜೆಗೆ ಕುಳಿತುಕೊಳ್ಳುವವರು ಅಕ್ಕಿ 1 ಸೇರು, ತೆಂಗಿನಕಾಯಿ 2, ಬಾಳೆ ಎಲೆ 2, ವೀಳ್ಯದೆಲೆ 2, ಅಡಿಕೆ 2, ನಾಣ್ಯ 1, ಕೌಳಿಗೆ 1, ಸೌಟು 1, ಹರಿವಾಣ 2, ಬಿಡಿಹೂವು, ಬೆಂಕಿಪೊಟ್ಟಣ, ಏಕಾರತಿ, ಬತ್ತಿ, ಹಣತೆ, ಕರ್ಪೂರ ಈ ಸಾಮಗ್ರಿಗಳನ್ನು ತರುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ
ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.












