ಚಿಕ್ಕಮಗಳೂರಿನ ರಸ್ತೆಯಲ್ಲಿ ನಿಧಿಗಾಗಿ ಶೋಧ ನಡೆಸುತ್ತಿದ್ಯಾ ಜಿಲ್ಲಾಡಳಿತ..?

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ಜಿಲ್ಲೆಯ ಎಲ್ಲಾ ತಾಲೂಕುಗಳ ರಸ್ತೆಗಳಲ್ಲಿ ಗುಂಡಿಗಳ ಸರಮಾಲೆ ಇದ್ದು, ಗುಂಡಿಗಳಿಂದ ಬೇಸತ್ತ ಗ್ರಾಮಸ್ಥರು, ಸಾರ್ವಜನಿಕರು ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಅದೇ ರೀತಿ ಇದೀಗ ಚಿಕ್ಕಮಗಳೂರು ನಗರದ ವಿಜಯಪುರ ಮುಖ್ಯ ರಸ್ತೆಯಲ್ಲಿ ವಿಭಿನ್ನ ರೀತಿಯ ಎಚ್ಚರಿಕೆ ಫಲಕದ ಬ್ಯಾನರ್‌ ಹಾಕುವ ಮೂಲಕ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಎಚ್ಚರಿಕೆ ಫಲಕದ ಬ್ಯಾನರ್‌ʼನಲ್ಲಿ ಏನಿದೆ?;
“ಯಾರೋ ಮಾಂತ್ರಿಕರು ವಿಜಯಪುರ ಮುಖ್ಯ ರಸ್ತೆಯಲ್ಲಿ ನಿಧಿ ಇದೆ ಎಂದು ಹೇಳಿದ ಕಾರಣ ಎಚ್ಚೆತ್ತ ಜಿಲ್ಲಾಡಳಿತ ಈ ರಸ್ತೆಯಲ್ಲಿ ನಿಧಿಯನ್ನು ಹುಡುಕಿಸುವ ಕಾರಣದಿಂದ ಅಲ್ಲಲ್ಲಿ ರಸ್ತೆ ಮಧ್ಯೆಯೇ ಹೊಂಡಗಳನ್ನು ತೋಡಿಸಿ ಹಾಗೆಯೇ ಬಿಟ್ಟದ್ದಾರೆ. – ನಿಧಾನವಾಗಿ ಚಲಿಸಿ ಗುಂಡಿಯಲ್ಲಿ ಬಿದ್ದರೆ ನಿಧಿ ಸಿಗುವುದಿಲ್ಲ” ಎಂಬ ಎಚ್ಚರಿಕೆ ಫಲಕದ ಬ್ಯಾನರ್‌ ಹಾಕುವ ಮೂಲಕ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ


ಈ ಹಿಂದೆ ರಸ್ತೆಯಲ್ಲಿನ ಗುಂಡಿಗೆ ಪೂಜೆ ಮಾಡಿ ಆಕ್ರೋಶ:
ಇದೇ ರಸ್ತೆಗೆ ಕಳೆದ ಎರಡು ದಿನಗಳ ಹಿಂದೆ ರಸ್ತೆಯಲ್ಲಿನ ಗುಂಡಿಗೆ ಪೂಜೆ ಮಾಡಿ ಪಲಾವ್, ವಡೆ, ನಿಂಬೆಹಣ್ಣು ಹೂವು, ಬ್ಯಾರಿಕೇಡ್ ಇಟ್ಟು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ವಿಜಯಪುರ ಮುಖ್ಯ ರಸ್ತೆಯಲ್ಲಿ ಮೊದಲು ಕಾಮಗಾರಿಗೆ ಗುಂಡಿ ತೆಗೆಯಲಾಗಿತ್ತು. ನಂತರ ಗುಂಡಿ ಮುಚ್ಚಿದ್ದರೂ ಮತ್ತೆ ರಸ್ತೆ ಗುಂಡಿಯಾಗಿತ್ತು. ಈ ಗುಂಡಿಯಿಂದಾಗಿ ಹಲವು ಬೈಕ್ ಗಳು ಅಪಘಾತಕ್ಕೀಡಾಗಿದೆ. ಈ ಬಗ್ಗೆ ಗುಂಡಿ ಮುಚ್ಚುವಂತೆ ಹಲವು ಬಾರಿ ನಗರಸಭೆಗೆ ಮನವಿ ಮಾಡಿಕೊಂಡರೂ, ನಗರ ಸಭೆ ಅಧಿಕಾರಿಗಳು ಕ್ಯಾರೇ ಎಂದಿಲ್ಲ. ಹೀಗಾಗಿ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ರಸ್ತೆಯಲ್ಲಿನ ಗುಂಡಿಗೆ ಪೂಜೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಇದೀಗ ಎಚ್ಚರಿಕೆ ಫಲಕದ ಬ್ಯಾನರ್‌ ಹಾಕುವ ಮೂಲಕ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.