ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಅಗ್ರಹಾರ ಹೋಬಳಿಯ ಅಗಳಬಾಗಿಲು ಗ್ರಾಮದ ಸದಾಶಿವ ದೇವಸ್ಥಾನದ ಸಮೀಪ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಂದಾಜು 150 ಟನ್‌ಗಿಂತ ಹೆಚ್ಚು ಮರಳನ್ನು ತಹಶೀಲ್ದಾರ್ ಎಸ್. ರಂಜಿತ್ ನೇತೃತ್ವದಲ್ಲಿ ಬುಧವಾರ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ.
ಸರ್ಕಾರದ ಜಾಗ ದುರುಪಯೋಗ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸ್ಥಳ ಪರಿಶೀಲಿಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಮರಳನ್ನು ವಶಕ್ಕೆ ಪಡೆಯಲಾಯಿತು ಎಂದು ತಹಶೀಲ್ದಾರ್ ತಿಳಿಸಿದರು.

ಪಿಡಿಒ ಮಂಜುನಾಥ್, ಗ್ರಾಮ ಆಡಳಿತಾಧಿಕಾರಿ ಸಿದ್ದಾರೂಢ ಇದ್ದರು.


















