ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ಶಿವಮೊಗ್ಗ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ.
ನಗರದ ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಯುತ್ತಿದ್ದ ವೇಳೆ ‘ಕೆಟಿಎಂ ಡ್ಯೂಕ್’ ಬೈಕ್ ಸವಾರನೊಬ್ಬ ಸಂಚಾರ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ ವಾಹನ ಚಲಾಯಿಸುತ್ತಿರುವುದು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸವಾರ ಬಾಲಕನಾಗಿರುವುದು ತಿಳಿದುಬಂದಿದೆ.

ಬಳಿಕ ಪೊಲೀಸರು ವಾಹನದ ಮಾಲೀಕನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘನೆಯ ನೋಟಿಸ್ ಜಾರಿ ಮಾಡಿ, ನಂತರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಚಾಲನಾ ಪರವಾನಗಿ ಹೊಂದಿರದ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ವಾಹನದ ಮಾಲೀಕನಿಗೆ ₹25,000 ದಂಡ ವಿಧಿಸಿ ಆದೇಶಿಸಿದೆ.














