ತರಬೇತಿ ವೇಳೆ ಕೈಕೊಟ್ಟ ಪ್ಯಾರಾಚೂಟ್: ವಾಯುಪಡೆ ಅಧಿಕಾರಿ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಪ್ಯಾರಾ ಜಂಪ್ ತರಬೇತಿ ನೀಡುವ ಸಮಯದಲ್ಲಿ ವಿಮಾನದಿಂದ ಕೆಳಗೆ ಹಾರುವಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಫಿಶ್​ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!


ಆಗ್ರಾದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್ ಡ್ರಾಪ್ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಪ್ಯಾರಾಚೂಟ್ ಬಳಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದರು. ಆದರೆ ವಾರಂಟ್ ಆಫೀಸರ್ ಜಿ.ಎಸ್. ಮಂಜುನಾಥ್ ನಾಪತ್ತೆಯಾಗಿದ್ದರು.

ಶೋಧ ಕಾರ್ಯ ನಡೆಸಿದಾಗ ಸಮೀಪದ ಜಮೀನಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಮಂಜುನಾಥ್ ಪತ್ತೆಯಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್


ಮಂಜುನಾಥ್ ತಂದೆ ಸುರೇಶ್, ತಾಯಿ ನಾಗರತ್ನ, ಕೃಷಿಕ ಕುಟುಂಬ. ಅವರಿಗೆ ಇಬ್ಬರು ಸಹೋದರಿಯರು, ಒಬ್ಬ ಸಹೋದರ ಇದ್ದಾರೆ. ಮಂಜುನಾಥ್ ಸಾಗರದಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರು. ಬಳಿಕ ಭಾರತೀಯ ವಾಯು ಸೇನೆಗೆ ಸೇರಿದ್ದರು. ವೈ ಗ್ರೇಡ್ ಅಧಿಕಾರಿಯಾಗಿದ್ದ ವಾರಂಟ್ ಆಫೀಸರ್ ಮಂಜುನಾಥ್, ಅಸ್ಸಾಂನಲ್ಲಿ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಸಾಂ ಮೂಲದ ಯುವತಿಯನ್ನು ಮದುವೆಯಾಗಿದ್ದರು.

ಘಟನೆ ಬಗ್ಗೆ ಶುಕ್ರವಾರ ಮಧ್ಯಾಹ್ನ ಮಂಜುನಾಥ್ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಶನಿವಾರ ತಡರಾತ್ರಿ ಅವರ ಪಾರ್ಥೀವ ಶರೀರ ಹೊಸನಗರಕ್ಕೆ ರವಾನೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿದೆ.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.