
ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಓ ನಂಜುಂಡಮ್ಮ ಅವರು 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್‌ಗೆ ದೃಢೀಕರಣ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟಿದ್ದು, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಿಡಿದಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
















