ಶೃಂಗೇರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರ ಸಂಪರ್ಕಿಸುವ ರಸ್ತೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾಮಗಾರಿಗಳು ಸಾರ್ವಜನಿಕರಿಗೆ ಕಂಟಕವಾಗಿವೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಒಂದಲ್ಲ ಒಂದು ಕಾಮಗಾರಿ ಹೆಸರಿನಲ್ಲಿ ರಸ್ತೆಯನ್ನು ಅಗೆದು ಬಿಟ್ಟ ಪರಿಣಾಮ ಜನಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕಾಮಗಾರಿಗಳು ಅತೀವ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಮಾರ್ಗದಲ್ಲಿ ಹಲವು ಸಣ್ಣಮಟ್ಟದ ಅಪಘಾತಗಳು ಸಂಭವಿಸಿರುವುದೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಇದೀಗ ಅಮೃತ್ ಯೋಜನೆ ಹೆಸರಿನಲ್ಲಿ ಪುನಃ ರಸ್ತೆ ಅಗೆದಿರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರಗೊಂಡಿದೆ. ಕಾಮಗಾರಿ ಸ್ಥಳಗಳಲ್ಲಿ ಅಗತ್ಯವಾದ ಸೂಚನಾ ಫಲಕಗಳು, ಎಚ್ಚರಿಕಾ ಫಲಕಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನು ಅಳವಡಿಸದೇ ಇರುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವಿಚಾರಕ್ಕೆ ಸ್ಪಂದಿಸಿ, ಕಾಮಗಾರಿಯನ್ನು ವಿಳಂಬವಿಲ್ಲದೆ ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.












