
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದ ಯುವಕರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಹಾಸನ ನಗರದಲ್ಲಿ ನಿನ್ನೆ ಸಂಜೆ ಆಟೋವೊಂದನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಯುವಕರ ತಂಡ, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಆತಂಕ ಮೂಡಿಸಿದ್ದಾರೆ. ಈ ಪುಂಡರ ಹುಚ್ಚಾಟದಿಂದಾಗಿ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು ಸಾರ್ವಜನಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯುವಕರು ಗಾಂಜಾ ಅಥವಾ ಇನ್ನಾವುದೇ ಮಾದಕ ದ್ರವ್ಯ ಸೇವಿಸಿ ಆಟೋ ಚಾಲನೆ ಮಾಡುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಯುವಕರ ಪುಂಡಾಟಿಕೆಯಿಂದ ತಾಳ್ಮೆ ಕಳೆದುಕೊಂಡ ಸಾರ್ವಜನಿಕರು, ಆಟೋವನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಬಳಿಕ ಮೂವರು ಯುವಕರಿಗೆ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿ ಹಾಸನ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?
ಸ್ಥಳಕ್ಕೆ ಆಗಮಿಸಿದ ಹಾಸನ ನಗರ ಠಾಣೆಯ ಪೊಲೀಸರು ಆಟೋವನ್ನು ಜಪ್ತಿ ಮಾಡಲಾಗಿದೆ.















