ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪೆಟ್ರೋನೆಟ್ ಕಂಪನಿಯ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿರೇಶಿಗರು ಗ್ರಾಮದ ವಿಜಯ್ ಕುಮಾರ್, ಹರ್ಷ ಬಂಧಿತ ಆರೋಪಿಗಳು.
ಇದನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಹಿರೇಶಿಗರು ಗ್ರಾಮದಲ್ಲಿ ಪೆಟ್ರೋನೆಟ್ ಕಂಪನಿಯ ಪೈಪ್ ಲೈನ್ ಕೊರೆದು ಟಿಪ್ಪರ್ ಲಾರಿಯೊಳಗೆ ಟ್ಯಾಂಕರ್ ಕೂರಿಸಿ ಪೆಟ್ರೋಲ್ ಕಳ್ಳತನ ಮಾಡಿದ್ದರು. ಟ್ಯಾಂಕರ್ ನಲ್ಲಿ ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಪತ್ತೆಯಾಗಿತ್ತು. ಈ ಕುರಿತು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪೆಟ್ರೋನೆಟ್ ಕಂಪನಿಯ ಮ್ಯಾನೇಜರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಕಳ್ಳತನದ ಪ್ರಮುಖ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದೆ.
ಇನ್ನು ಇದೆ ಗ್ಯಾಂಗ್ 2011ರಲ್ಲೂ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದರು.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ ಶಿಪ್; ನೇರ ನಿಮ್ಮ ಖಾತೆಗೆ ಜಮಾ!












