
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಛಾಯಾಗ್ರಾಹಕರ ಸಂಘದಿಂದ ಛಾಯಾಗ್ರಾಹಕರ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ತರೀಕೆರೆ ತಾಲ್ಲೂಕು ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದರು.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ; ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ಜಿ.ಹೆಚ್. ಶ್ರೀನಿವಾಸ್ ರವರು ಛಾಯಾಗ್ರಹಕರು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿದ್ದರೂ ಅವರಿಗೆ ಸರ್ಕಾರದಿಂದ ಯಾವುದೇ ಅನುಕೂಲಗಳು ಸಿಗುತ್ತಿಲ್ಲ ಎನ್ನುವುದನ್ನು ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದು ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ನ್ಯಾಯ ಕೊಡಿಸುವುದಾಗಿ ತಿಳಿಸಿದರು. ಹಾಗೂ ಛಾಯಾಗ್ರಾಹಕರ ಸಂಘಕ್ಕೆ ನಿವೇಶನವನ್ನು ಒದಗಿಸುವ ಭರವಸೆಯನ್ನು ನೀಡಿದರು.

ಸಂಘದ ಅಧ್ಯಕ್ಷರಾದ ಕೆ.ಭವಾನಿಶಂಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರವು ಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಿದ್ದರೂ ಯಾವುದೇ ರೀತಿಯ ಸವಲತ್ತುಗಳನ್ನು ಇದುವರೆಗೂ ನೀಡಿಲ್ಲ. ಶಾಸಕರು ಇದರ ಬಗ್ಗೆ ಸರ್ಕಾರದ ಗಮನವನ್ನು ಸೆಳೆಯಬೇಕು ಹಾಗೂ ನಮ್ಮ ತರೀಕೆರೆ ನಗರ ವ್ಯಾಪ್ತಿಯಲ್ಲಿ ಸಂಘಕ್ಕೊಂದು ನಿವೇಶನವನ್ನು ಕೊಡಿಸಿಕೊಡಬೇಕೆಂದು ಮನವಿ ಮಾಡಿದರು.
ಉಪ ವಿಭಾಗ ಅಧಿಕಾರಿಗಳಾದ ಕಾಂತರಾಜ್ ರವರು ಮಾತನಾಡಿ, ಛಾಯಾಗ್ರಾಹಕರು ತೆಗೆಯುವ ಛಾಯಾಚಿತ್ರಗಳು ನಮ್ಮ ಜೀವನದಲ್ಲಿ ಕಳೆದ ಖುಷಿ ಕ್ಷಣಗಳನ್ನು ನೆನಪಿಸುತ್ತವೆ. ಇವರುಗಳು ನಮ್ಮ ನೆನಪುಗಳನ್ನು ಶಾಶ್ವತವಾಗಿ ಉಳಿಸುತ್ತಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕರುಗಳಾದ ಹೆಚ್.ಪಿ ಸೋಮನಾಥಾರಾಧ್ಯ, ಅಕ್ಬರ್, ಎ.ಎಸ್ ಛಾಯಾಪತಿ ಅವರುಗಳಿಗೆ ಛಾಯಾಗ್ರಹಣ ಕ್ಷೇತ್ರದಲ್ಲಿನ ಸೇವೆಗಾಗಿ ಗೌರವ ಸಮರ್ಪಣೆ ಮಾಡಲಾಯಿತು. ಹಾಗೆಯೇ ವೈದ್ಯಕೀಯ ಕ್ಷೇತ್ರದಲ್ಲಿಯ ಉತ್ತಮ ಸೇವೆಗಾಗಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ||ಚಂದ್ರಶೇಖರ್ ಬಿ.ಜಿ. ಹಾಗೂ ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ದೇವರಾಜ್ ಟಿ.ಎಮ್. ಅವರುಗಳಿಗೆ ಮತ್ತು ಪತ್ರಿಕಾ ಮಾಧ್ಯಮ ಕ್ಷೇತ್ರದಲ್ಲಿನ ಸೇವೆಗಾಗಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ ಕೃಷ್ಣಾನಾಯ್ಕ್ ಅವರಿಗೆ ಗೌರವ ಸಮರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾ ಸಂಘದ ಅಧ್ಯಕ್ಷರಾದ ವಿಜಯಕುಮಾರ್ ಜಾಧವ್, ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀನಿವಾಸ್, ತಾಲ್ಲೂಕು ಸಂಘದ ಖಜಾಂಚಿ ಹೆಚ್.ಎಸ್. ವಿನಯ್ ಹಾಗೂ ಎಲ್ಲಾ ನಿರ್ದೇಶಕರುಗಳು, ಜಿಲ್ಲಾ ಸಂಘದ ನಿರ್ದೇಶಕರುಗಳಾದ ಡಿ.ಕೆ ರುದ್ರೇಶ್ ಹಾಗೂ ಎಸ್ ನಾಗರಾಜ್, ಕೆ.ಪಿ.ಎ. ಪದಾಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಮೂರು ನಾಲ್ಕು ತಿಂಗಳಿನಿಂದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ನಗರಸಭೆ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ನಡೆಯುತ್ತಿದ್ದ ಜಟಾಪಟಿಗೆ ತೆರೆ ಬಿದಿದ್ದು, ಕೊನೆಗೂ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ನಿನ್ನೆ (ಬುಧವಾರ) ಸಂಜೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿಯೇ ರಾಜೀನಾಮೆ ನೀಡಲು ಮುಂದಾಗಿದ್ದ ವೇಣುಗೋಪಾಲ್:
ಪಕ್ಷದ ಆಂತರಿಕ ಒಪ್ಪಂದದ ಪ್ರಕಾರ ಒಂದು ವರ್ಷದ ಅವಧಿಯನ್ನು ವೇಣುಗೋಪಾಲ್ ಅವರಿಗೆ ಬಿಟ್ಟು ಕೊಡಲಾಗಿತ್ತು. ಆ ಪ್ರಕಾರ ರಾಜೀನಾಮೆಯನ್ನೂ ಸಲ್ಲಿಸಿದ್ದರಾದರೂ, ಚುನಾವಣೆ ಸಂದರ್ಭದಲ್ಲಿ ಅಧ್ಯಕ್ಷರ ಬದಲಾವಣೆ ಬೇಡ ಎನ್ನುವ ಕಾರಣಕ್ಕೆ ಪಕ್ಷ ಅವರ ರಾಜೀನಾಮೆಯನ್ನು ಹಿಂತೆಗೆಸಿತ್ತು. ಆದರೆ ಚುನಾವಣೆ ಮುಗಿದ ಕೂಡಲೇ ರಾಜೀನಾಮೆ ನೀಡುವುದಾಗಿ ತಿಳಿಸಿದ್ದ ವೇಣುಗೋಪಾಲ್ ನಂತರ ರಾಜೀನಾಮೆ ನೀಡಿರಲಿಲ್ಲ. ಮಾಜಿ ಶಾಸಕ ಸಿ.ಟಿ.ರವಿ ಸೇರಿದಂತೆ ಬಹುತೇಕ ಬಿಜೆಪಿ ಸದಸ್ಯರು ರಾಜೀನಾಮೆ ನೀಡುವಂತೆ ಒತ್ತಡ ಹೇರಿದರೂ ಅದಕ್ಕೆ ಒಪ್ಪಿರಲಿಲ್ಲ. ಈ ಬಗ್ಗೆ ಪಕ್ಷದಲ್ಲೇ ಅಸಮಾಧನವೂ ವ್ಯಕ್ತವಾಗಿತ್ತು.
ನಂತರ ಮಂಗಳವಾರ ನಡೆದ ನಗರ ಸಭೆ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಅದೇ ಸಂದರ್ಭದಲ್ಲಿ ಅವರ ಮೇಲೆ ತೀವ್ರ ಒತ್ತಡವನ್ನೂ ಹೇರಲಾಗಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.













