ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಅತಿ ವೇಗವಾಗಿ ಬಂದ ಪಿಕಪ್ ವಾಹನವೊಂದು ರಸ್ತೆಯ ಪಕ್ಕದ ಮನೆಯ ಕಾಂಪೌಂಡ್ಗೆ ಗುದ್ದಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಶೆಟ್ಟಿಕೊಪ್ಪ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಎನ್.ಆರ್.ಪುರ ಕಡೆಯಿಂದ ಬಂದ ಪಿಕಪ್ ವಾಹನ ಚಾಲಕನಿಗೆ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ಗೆ ಗುದ್ದಿ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಮನೆಯ ಮುಂಭಾಗದ ಗೇಟ್ ಹಾಗೂ ಕಾಂಪೌಂಡ್ ಸಂಪೂರ್ಣವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಇಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಿಕಪ್ ವಾಹನವು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!














