
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದಿರುವ ಘಟನೆ ಪಟ್ಟಣದ ವೀರಪ್ಪ ಗೌಡ ಸರ್ಕಲ್ ಬಳಿ ನಡೆದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ತೆರಿಗೆಯಲ್ಲಿ ರಿಯಾಯಿತಿ

ಶೃಂಗೇರಿ ಭಾಗದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹವನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸುತ್ತಿದ್ದರೂ ಕೂಡ ಇದಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ ಶೃಂಗೇರಿಯ ಕಲ್ಕಟ್ಟೆ ಸಮೀಪ ಮರಳು ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: SBI ನಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ನಿನ್ನೆ ರಾತ್ರಿ ಸುಮಾರು 11:30 ರ ವೇಳೆಯಲ್ಲಿ ಪ್ರಸಾದ್ ಎನ್ನುವವನಿಗೆ ಸೇರಿದ್ದ KL 13 H2308 ಕೇರಳ ನೊಂದಣಿಯ ಪಿಕಪ್ ವಾಹನವನ್ನು ಶೃಂಗೇರಿ ಪಿಎಸ್ಐ ಅಭಿಷೇಕ್ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಇದನ್ನೂ ಓದಿ: £7,500 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ













