ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ

ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿಯಲ್ಲಿ ಮಂಜು ಹಿಡಿದಿರುವ ಕಾರಣ ರಸ್ತೆಯ ದೃಶ್ಯತೆ ಕಡಿಮೆಯಾಗಿತ್ತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತವಾದ ಕೂಡಲೇ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶ












