ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ದೌರ್ಜನ್ಯದ ಕುರಿತು ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾಳೆ ಎಂದು ತಿಳಿದುಬಂದಿದೆ.
ಬಳಿಕ ಬಾಲಕಿಯ ಪೋಷಕರು ಶೃಂಗೇರಿಯ ಸಿಡಿಪಿಒ ಕಚೇರಿಗೆ ಆಗಮಿಸಿ ದೂರು ದಾಖಲಿಸಿದ್ದಾರೆ. ಸಿಡಿಪಿಒ ನೀಡಿದ ದೂರಿನ ಅನ್ವಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಮೊಹಮ್ಮದ್ ಶಮೀರ್ ಎಂಬಾತನ ವಿರುದ್ಧ ಕೇಸ್ ದಾಖಲಾಗಿದ್ದು, ಅನ್ಯಕೋಮಿನ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿವಿಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆರೋಪಿ ಬಂಧನಕ್ಕೆ ಒತ್ತಾಯಿಸಿ ಠಾಣೆ ಎದುರು ಸಾರ್ವಜನಿಕರು ಜಮಾವಣೆಗೊಂಡಿದ್ದರು.
ಇದೀಗ ಶೃಂಗೇರಿ ಪೊಲೀಸರು ಆರೋಪಿ ಮೊಹಮ್ಮದ್ ಶಮೀರ್ನನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಡಿ ವೈ ಎಸ್ ಪಿ ಬಾಲಾಜಿ ಸಿಂಗ್, ಸಿಪಿಐ ಭರತ್ ಹಾಗೂ ಪಿ ಎಸ್ ಐ ಅಭಿಷೇಕ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.












