
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊಹಮದ್ ಝಕ್ರಿಯ (55) ನೇಣು ಬಿಗಿದುಕೊಂಡ ಹೆಡ್ ಕಾನ್‌ಸ್ಟೇಬಲ್.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಕಳೆದ ಕೆಲವು ದಿನದಿಂದ ಮೊಹಮದ್ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ ಬಂದಿದ್ದರು. ನಿನ್ನೆ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ. ರಾತ್ರಿ ಠಾಣೆಯಲ್ಲೆ ಮೊಹಮದ್ ಝಕ್ರಿಯ ಅವರು ನೇಣಿಗೆ ಕೊರಳೊಡ್ಡಿದ್ದಾರೆ. ಠಾಣೆಯ ಹಿಂಬದಿಯ ಸೆಲ್‌ಗಳಿರುವ ಜಾಗದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ‘ಅವರಿಗೆ ಆರೋಗ್ಯ ಸಮಸ್ಯೆಯೂ ಇತ್ತು. ವಾಟ್ಸಪ್ ಗ್ರೂಪ್ ನಲ್ಲಿ ಡೆತ್ ನೋಟ್ ಫಾರ್ವಡ್ ಮಾಡಿದ್ದಾರೆ. ಅದರಲ್ಲಿ ಠಾಣೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು ಅಂತ ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅವರ ಕುಟುಂಬದವರ ಗಮನಕ್ಕೆ ತಂದಿದ್ದೇವೆ. ಅವರ ಕುಟುಂಬದವರು ದೂರು ಕೊಟ್ಟ ಬಳಿಕ ವಿಚಾರಣೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.













