ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹೊಸ ವರ್ಷದ ಆಚರಣೆಗೆಂದು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಟೀ ಅಂಗಡಿಯಲ್ಲಿ ದಾಂಧಲೆ ಎಬ್ಬಿಸಿದ ಘಟನೆ ವರದಿಯಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಮುಂಜಾನೆ ಸಮಯದಲ್ಲಿ ಕೋರಮಂಗಲದ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಪುನೀತ್ ಹಾಗೂ ಅವರ ಸ್ನೇಹಿತರು ಬಸ್ ನಿಲ್ದಾಣದ ಬಳಿ ಇರುವ ಟೀ ಅಂಗಡಿಗೆ ತೆರಳಿದ್ದರು. ಟೀ ನೀಡಲು ವಿಳಂಬವಾದ ಕಾರಣ ಕೋಪಗೊಂಡ ಪುನೀತ್, ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಟೀ ಅಂಗಡಿಯಲ್ಲಿ ದಾಂಧಲೆ ನಡೆಸಿ ಧ್ವಂಸ ಮಾಡಿದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ
ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸ್ ಕಾನ್ಸ್ಟೇಬಲ್ ಪುನೀತ್ನ್ನು ಠಾಣೆಗೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.












