ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ) ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದ ಬೆಳ್ಳಿಚಡವು ಬಳಿ ಅಕ್ರಮ ಗೋಸಾಗಾಟಗಾರರ ಮೇಲೆ ಪೊಲೀಸರು ಪೈರಿಂಗ್ ನಡೆಸಿದ ಘಟನೆ ನಡೆದಿದೆ.
ಇದನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ

ಹಾಸನದಿಂದ ಕೇರಳದತ್ತ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಖದೀಮರು, ನೆಟ್ಟಣಿಗೆ ಮುಡ್ನೂರು–ಬೆಳ್ಳಿಚಡವು ಒಳರಸ್ತೆಯ ಮೂಲಕ ಕೇರಳಕ್ಕೆ ಸಾಗುವ ಯತ್ನ ಮಾಡಿದರು. ವಾಹನ ನಿಲ್ಲಿಸಲು ಸೂಚಿಸಿದ ಪೊಲೀಸರ ಮೇಲೆ ಆರೋಪಿಗಳು ಲಾರಿ ಹತ್ತಿಸಲು ಪ್ರಯತ್ನಿಸಿ ಪರಾರಿಯಾಗಲು ಮುಂದಾದರು.
ಈಚರ್ ಲಾರಿಯನ್ನು ಚೇಸ್ ಮಾಡಿದ ಪೊಲೀಸರು ಬೆಳ್ಳಿಚಡವು ಬಳಿ ವಾಹನ ಬಿಟ್ಟು ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ತಡೆಹಿಡಿಯುವ ವೇಳೆ ಹಲ್ಲೆಗೆ ಮುಂದಾದರು. ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಜಂಬು ರಾಜ್ ಮಹಾಜನ್ ಶೌರ್ಯ ಪ್ರದರ್ಶಿಸಿ ಗುಂಡು ಹಾರಿಸಿ ಓರ್ವ ಆರೋಪಿಯನ್ನು ಬಂಧಿಸಿದರು.
ಇದನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ
ಬಂಧಿತನನ್ನು ಕೇರಳ ಮೂಲದ ಅಬ್ದುಲ್ಲಾ ಎಂದು ಗುರುತಿಸಲಾಗಿದ್ದು, ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾನೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾರೆ.
ಪೊಲೀಸರು ಘಟನಾ ಸ್ಥಳದಿಂದ 10 ಜಾನುವಾರುಗಳು ಹಾಗೂ ಈಚರ್ ಲಾರಿ ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡಿದ ನಿಷ್ಠಾವಂತ ಹಾಗೂ ಖಡಕ್ ಸಬ್ ಇನ್ಸ್ಪೆಕ್ಟರ್ ಜಂಬು ರಾಜ್, ತಮ್ಮ ಧೈರ್ಯ ಮತ್ತು ಕರ್ತವ್ಯನಿಷ್ಠೆಗಾಗಿ ಪ್ರಸಿದ್ಧರಾಗಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಗ್ರಾಪಂ ಸಿಬ್ಬಂದಿಗಳಿಗೆ ವೇತನ ಪಾವತಿ: ಮಹತ್ವದ ಆದೇಶ












