ಚಿಕ್ಕಮಗಳೂರು: ಗೌರಿ ಗಣೇಶ ಹಬ್ಬದಂದು ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಸದಾ ಕೇಸು ಎಂದು ಗಂಭೀರ ವಾತಾವರಣ ಇರುತ್ತಿದ್ದ ಠಾಣೆಯಲ್ಲಿ ಹಬ್ಬದ ವಾತಾವರಣ ನೆಲೆಸಿತ್ತು. ಗೌರಿ ಗಣೇಶ ಹಬ್ಬದ ವಿಶೇಷವಾಗಿ ಗರ್ಭಿಣಿಯಾಗಿದ್ದ ಮಹಿಳಾಪೇದೆ ಮಮತಾ ಅವರಿಗೆ ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇಂತಹ ವಿಶೇಷ ಸನ್ನಿವೇಶಕ್ಕೆ ಪಾತ್ರವಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪೊಲೀಸ್ ಠಾಣೆ.

ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು

ಮಹಿಳಾಪೇದೆ ಮಮತಾ ಅವರಿಗೆ ಹೆರಿಗೆ ಸುಖಕರವಾಗಲಿ ಎಂದು ಹಾರೈಸಿ, ಠಾಣೆಯ ಸಿಬ್ಬಂದಿಗಳು ಬಾಗೀನ ಅರ್ಪಿಸಿ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಸದಾ ಕಾನೂನು ಸುವ್ಯವಸ್ಥೆ ಕಾಪಾಡುವ ಜಂಜಾಟದಲ್ಲಿಯೇ ಮುಳುಗಿರುವ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆಯ ಮಾತುಗಳು ಕೇಳಿಬಂದಿವೆ.

ಇದನ್ನೂ ಓದಿ; ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ

ಇನ್ನು ಈ ಕಾರ್ಯಕ್ರಮದಲ್ಲಿ ಪಿ.ಎಸ್.ಐ ಸಜಿತ್ ಕುಮಾರ್, ಎ.ಎಸ್.ಐ ತಿಪ್ಪೇಶ್, ನಾಗೇಗೌಡ, ರೇಖಾ ರಾಜಪ್ಪ, ಶಿವಕುಮಾರ್, ಕೃಷ್ಣಮೂರ್ತಿ, ಕವಿತ ಮುಂತಾದವರು ಇದ್ದರು.

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಅಪಘಾತ | ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೆಡ್ ಅಳವಡಿಕೆ

ಮೂಡಿಗೆರೆ:  (ನ್ಯೂಸ್ ಮಲ್ನಾಡ್ ವರದಿ) ಉತ್ತಮ ಗುಣಮಟ್ಟದ ರಸ್ತೆಗಳಿದ್ದರೂ ಸಹ ಚಾರ್ಮಾಡಿ ಘಾಟಿಯಲ್ಲಿ ಮಂಜು ಕವಿದ ವಾತಾವರಣ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸುವುದರ ಜೊತೆಗೆ ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಪಿ.ಎಸ್.ಐ ಜಂಬೂರಾಜ್ ಮಹಾಜನ್ ತಿಳಿಸಿದರು.

ಇದನ್ನೂ ಓದಿ; HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?

ಶನಿವಾರ ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪಘಾತ ತಡೆಗಟ್ಟಲು ಬ್ಯಾರಿಕೆಡ್ ಗಳನ್ನು ಅಳವಡಿಸಲಾಯಿತು. ಯುವಕರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಚಾರ್ಮಾಡಿ ಘಾಟಿಯ ತಿರುವಿನ ಬಳಿ ರಸ್ತೆ ಬದಿಯ ಮೋರಿಗಳು ಬಿರುಕು ಬಿಟ್ಟಿದೆ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಮುಂಜಾಗ್ರತಾ ಕ್ರಮವನ್ನು ಬಣಕಲ್ ಪೊಲೀಸರು ಕೈಗೊಂಡರು. ಬಸ್ ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದರು.

ಈ ಸಂದರ್ಭದಲ್ಲಿ ಬಣಕಲ್ ಠಾಣೆಯ ಎ.ಎಸ್.ಐ ಶಶಿ, ಜಗದೀಶ್, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.