ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಕ್ಷೇತ್ರದ ಎಲ್ಲ ರಸ್ತೆಗಳೂ ಹೊಂಡ, ಗುಂಡಿಗಳಿಂದ ಕೂಡಿದ್ದು, ಶಾಸಕರು ಹೊಂಡ ಮುಚ್ಚದಿದ್ದರೆ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಅರುಣ್ ಕುಮಾರ್ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?

ರಸ್ತೆಯ ಹೊಂಡ ಮುಚ್ಚುವಂತೆ ಬುಧವಾರ ಬಿ.ಎಚ್.ಕೈಮರ ಸಮೀಪದ ಮುಖ್ಯರಸ್ತೆಯಲ್ಲಿ ರಸ್ತೆ ತಡೆ ಹಾಗೂ ಹೊಂಡಗಳಿಗೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಶಾಸಕರು ಗುಣಮಟ್ಟದ ರಸ್ತೆ ಮಾಡುವುದಾಗಿ ಭರವಸೆ ನೀಡಿದ್ದರು. ಗುಣಮಟ್ಟದ ರಸ್ತೆ ಮಾಡಿದ್ದರೆ ಇಷ್ಟು ಬೇಗ ಹೊಂಡಗಳು ಬೀಳುತ್ತಿರಲಿಲ್ಲ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ತೆರಿಗೆ ಜಾಸ್ತಿ ಮಾಡಿ ಹಣ ಹೊಂದಾಣಿಕೆ ಮಾಡಲಾಗಿದೆ. ಅಭಿವೃದ್ಧಿಗೆ ಇಟ್ಟ ಹಣದಿಂದ ರಸ್ತೆ ಗುಂಡಿಗಳನ್ನು ಮುಚ್ಚಬೇಕಾಗಿತ್ತು. ಹೊಂಡ, ಗುಂಡಿಗಳನ್ನು ಮುಚ್ಚದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ವಿ.ನೀಲೇಶ್ ಮಾತನಾಡಿ, ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ರಸ್ತೆಗಳ ಹೊಂಡ ಮುಚ್ಚುವಂತೆ ಪ್ರತಿಭಟನೆ ನಡೆಸಲಾಗಿದೆ. ರಸ್ತೆ ತುಂಬ ಹೊಂಡ ಬಿದ್ದಿರುವುದರಿಂದ ಶಿವಮೊಗ್ಗಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗಲು ಸಾಧ್ಯವಾಗದ ಪರಿಸ್ಥಿತಿ ಬಂದಿದೆ. ಶಾಸಕರು ಕ್ಷೇತ್ರದ ಎಲ್ಲ ರಸ್ತೆಗಳಲ್ಲಿ ಓಡಾಡಿದರೆ ರಸ್ತೆಯ ಹೊಂಡಗಳು ಕಾಣಿಸುತ್ತವೆ. ರಸ್ತೆಗೆ ಬಂದರೆ ಹೊಂಡ, ತೋಟಕ್ಕೆ ಹೋದರೆ ಆನೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ತಾಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ದಯಾನಂದ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿಂಗಾಪುರದಂತೆ ರಸ್ತೆ ಮಾಡುತ್ತೇವೆ ಎಂದಿದ್ದರು. ಈಗ ರಸ್ತೆ ಗುಂಡಿಯೇ ಮುಚ್ಚುತ್ತಿಲ್ಲ. ಆದಷ್ಟು ಬೇಗ ರಸ್ತೆಯ ಗುಂಡಿ ಮುಚ್ಚಿ ಅಪಘಾತ ತಪ್ಪಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್















