ಮೇ 15ರಂದು ಮುರೊಳ್ಳಿಯ ಶ್ರೀ ವೀರಭದ್ರ ಸ್ವಾಮಿ ದೇವಾಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ

ಕೊಪ್ಪ ತಾಲ್ಲೂಕಿನ ಅಗಳಗಂಡಿ ಗ್ರಾಮದ ಮುರೊಳ್ಳಿಯಲ್ಲಿರುವ ಪ್ರಸಿದ್ಧ ಶ್ರೀ ಪರಿವಾರ ಸಹಿತ ಶ್ರೀ ವೀರಭದ್ರ ಸ್ವಾಮಿ ದೇವಾಸ್ಥಾನದಲ್ಲಿ ಮೇ 15ರಂದು ಪುನಃ ಪ್ರತಿಷ್ಠಾಪನಾ ಮಹೋತ್ಸವ, ಕುಂಭಾಭಿಷೇಕ ಹಾಗೂ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದೆ.

ಪುರಾತನ ಕಾಲದಿಂದಲೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ವೀರಭದ್ರ, ಶ್ರೀ ಭದ್ರಕಾಳಿ ಹಾಗೂ ಶ್ರೀ ನಾಗದೇವರ ದೇವಾಲಯಗಳು ಭಕ್ತರ ಸಹಕಾರದಿಂದ ಜೀರ್ಣೋದ್ಧಾರಗೊಂಡಿದ್ದು, ನೂತನ ಶಿಲಾಮಯ ದೇವಸ್ಥಾನಗಳ ಪುನಃ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ತಮ್ಮ ಅಮೃತ ಹಸ್ತದಿಂದ ನೆರವೇರಿಸಲಿದ್ದಾರೆ.

ಮೇ 15ರ ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ 9.30ರೊಳಗೆ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ದೇವತಾ ಮೂರ್ತಿಗಳಿಗೆ ಪ್ರಾಣ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬಳಿಕ ಮಹಾಪೂಜೆ ಹಾಗೂ ಮಹಾಮಂಗಳಾರತಿ ನೆರವೇರಲಿದೆ.

ಇದೇ ಸಂದರ್ಭದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ಡಿ. ರಾಜೇಗೌಡ ಅವರ ಶಾಸಕರ ನಿಧಿಯಿಂದ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾದ ಭವ್ಯ ಸಮುದಾಯ ಭವನವನ್ನು ಪರಮ ಪೂಜ್ಯ ಜಗದ್ಗುರುಗಳು ಉದ್ಘಾಟಿಸಲಿದ್ದಾರೆ. ಅಲ್ಲದೇ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಶಾಸಕ ಟಿ.ಡಿ. ರಾಜೇಗೌಡರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಭಕ್ತಾದಿಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.