ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ದೇವಾಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಫೋಟೊ ಶೂಟ್‌ಗೆ ತೆರಳಿದ್ದ ಫೋಟೊ ಗ್ರಾಫರ್ಸ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ದೇಗುಲದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಸ್ಥಳೀಯ ಕೆಲವರು ಫೋಟೊ ಶೂಟ್ ಮಾಡದಂತೆ ಅಡ್ಡಿ ಮಾಡಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಛಾಯಾಗ್ರಾಹಕ ಯಶ್ ಹಾಗೂ ತಂಡದ ಮೇಲೆ ಸ್ಥಳೀಯರ ಗುಂಪು ಹಲ್ಲೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಸಹೋದ್ಯೋಗಿ ಮೇಲೆ ಹಲ್ಲೆಆಗಿದೆ ಎಂದು ಹಾಸನ ಕುವೆಂಪು ನಗರದ ನವೀನ್ ನಂದನ್ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಪ್ರಶಾಂತ್ ಬೆಟ್ಟಗೆರೆ ಹಾಗೂ ರಕ್ಷಯ್ ಮಕ್ಕಿನ ಗದ್ದೆ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ದೂರು ಪ್ರತಿದೂರು ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಲ್ಲೆಗೊಳಗಾದ ಫೋಟೊಗ್ರಾಫರ್ಸ್‌ಗೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
















