ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ಪ್ರಿನ್ಸಿಪಾಲ್ ಓರ್ವರು ತರಗತಿಯಿಂದ ಮೂವರು ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ತರಗತಿಯಿಂದ ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಬಳಿಕ ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ವಿಷಯ ತಿಳಿದ ಹಿಂದೂ ಮುಖಂಡರು ಕಾಲೇಜಿಗೆ ಆಗಮಿಸಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












