ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ ಯುವ ನಿಧಿ ಯೋಜನೆಯನ್ನು ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿದರು.
ಇದನ್ನೂ ಓದಿ; ಪೌರ ಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 1433 ಹುದ್ದೆ ಮಂಜೂರು

ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ಕುರ್ಚಿ ಕದನದ ಬಗ್ಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು” ಸಿಎಂ ಕುರ್ಚಿ ಮಾರಾಟಕ್ಕಿದೆ” ಎಂದು ಫಲಕ ಹಾಕಿ ವ್ಯಂಗ್ಯ ಪ್ರತಿಭಟನೆ ನಡೆಸಿದರು.


ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ನಗರಸಭೆ ಸದಸ್ಯರುಗಳು, ಮಹಿಳಾ ಮೋರ್ಚಾದ ಕಾರ್ಯಕರ್ತರು, ಯುವ ಮೋರ್ಚಾ ನಗರ ಗ್ರಾಮಾಂತರ ಮತ್ತು ಜಿಲ್ಲಾ ಪದಾಧಿಕಾರಿಗಳು, ಉಪಸ್ಥಿತರಿದ್ದರು.

ಅಜ್ಜಂಪುರ: ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಉಷಾ (13) ಮೃತ ಪಟ್ಟ ವಿದ್ಯಾರ್ಥಿನಿ.
ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಉಷಾ, ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಬಿದ್ದಿದ್ದಾಳೆ. ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು 108 ಮೂಲಕ ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ, ಆಕೆಯನ್ನ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಆಕೆ ಸಾವಿಗೀಡಾಗಿದ್ದಾಳೆ. ಮೃತ ಉಷಾ ಹಲವು ವರ್ಷಗಳಿಂದ ಟಿ.ಬಿ. ಖಾಯಿಲೆಯಿಂದ ಬಳಲುತ್ತಿದ್ದಳು ಎಂದು ವಸತಿ ಶಾಲೆಯ ಪ್ರಾಂಶುಪಾಲ ಶಿವರಾಜ್ ಸ್ಪಷ್ಟಪಡಿಸಿದ್ದು.
ಹಲವು ಬಾರಿ ಆಕೆಯ ಪೊಷಕರಿಗೆ ತಿಳಿಸಿ ಮನೆಗೆ ಕಳುಹಿಸಿ ಅಲ್ಲಿಯೇ ವ್ಯಾಸಂಗ ಮಾಡುವಂತೆ ಹೇಳಿದ್ದರು. ಆದರೆ, ಪೋಷಕರು ಇದೊಂದು ವರ್ಷ ವ್ಯಾಸಂಗ ಮಾಡಲಿ ಮುಂದಿನ ವರ್ಷ ಬದಲಾಯಿಸುವುದಾಗಿ ಹೇಳಿ ವಸತಿ ಶಾಲೆಯಲ್ಲಿ ಬಿಟ್ಟಿದ್ದರು. ಇತ್ತೀಚೆಗೆ ಉಷಾ ತುಂಬಾ ಡಿಪ್ರೆಷನ್ ಗೆ ಒಳಗಾಗಿದ್ದಳು. ಪೋಷಕರು ಚಿಕಿತ್ಸೆ ಕೊಡಿಸಿದ್ದು ಪ್ರತಿ ದಿನ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಳು.
ದುರಾದೃಷ್ಟವಶಾತ್ ಆಸ್ಪತ್ರೆಗೆ ಬರುವಷ್ಟರಲ್ಲಿ ಬಾಲಕಿ ತೀರಿಕೊಂಡಿದ್ದಳು. ವಿದ್ಯಾರ್ಥಿನಿ ಅಗಲಿಕೆ ತುಂಬಾ ನೋವು ತಂದಿದೆ ಎಂದು ವಸತಿ ಶಾಲೆಯ ಪ್ರಾಂಶುಪಾಲ ತಿಳಿಸಿದ್ದಾರೆ. ಸಾವಿನ ಬಗ್ಗೆ ಅನುಮಾನ ಬಾರದಿರಲು ಪೋಸ್ಟ್ ಮಾರ್ಟಂಗಾಗಿ ಮೃತದೇಹವನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ.













