ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ರೈತರಿಗೆ ಸೂಕ್ತ ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡುವಂತೆ ತಾಲೂಕು ಕಚೇರಿ ಮುಂಭಾಗ ಬಿಜೆಪಿ ಶೃಂಗೇರಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ತಾಲೂಕಿನ ರೈತರಿಗೆ ಬೆಳೆ ವಿಮೆ ಪರಿಹಾರ ಸರಿಯಾಗಿ ತಲುಪದೇ ಇರುವ ಗಂಭೀರ ಸಮಸ್ಯೆಯಾಗಿದೆ. ರೈತರು ಸಂಕಷ್ಟದಲ್ಲಿದ್ದು ಕೃಷಿಕರ ನೋವಿಗೆ ತಕ್ಷಣ ಸ್ಪಂದಿಸಿ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕ್ಷೇತ್ರದ ಮಾಜಿ ಶಾಸಕ ಡಿ. ಎನ್ ಜೀವರಾಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೇಳಿದರು. ಪ್ರತಿಭಟನೆಯ ಬಳಿಕ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಲಾಯಿತು.


ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಉಮೇಶ್ ತಲಗಾರು, ಶೃಂಗೇರಿ ಶಿವಣ್ಣ, ನೂತನ್ ಕುಮಾರ್, ವೇಣುಗೋಪಾಲ್ , ರಮೇಶ್, ತಿಪ್ಪನಮಕ್ಕಿ ವಿಜಯ್, ನಂದೀಶ್ ಕುಂಚೆಬೈಲು, ಅಂಗುರ್ಡಿ ದಿನೇಶ್, ಸುನೀಲ್ ಇದ್ದರು.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ













