ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕಾನೂನಿನಲ್ಲಿ 7 ಲಕ್ಷ ರೂಪಾಯಿ ದಂಡ ಮತ್ತು ಹಿಟ್ ಆ್ಯಂಡ್ ರನ್ ರಸ್ತೆ ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ; ರೈತರೇ ಗಮನಿಸಿ; PM KISAN ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

ಈ ಬಗ್ಗೆ ಇಂದು ಶೃಂಗೇರಿ ವಾಹನ ಮಾಲೀಕರು ಹಾಗೂ ಚಾಲಕರು, ಕರುನಾಡ ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ (ನೋ) ಶೃಂಗೇರಿ, ವತಿಯಿಂದ ಹೊಸ ಕಾನೂನನ್ನು ಹಿಂಪಡೆಯುವಂತೆ ಬಸ್ ಸ್ಟ್ಯಾಂಡ್ ಮೂಲಕ ಭಾರತಿ ಬೀದಿ ಮುಖಾಂತರ ವೆಲ್ಕಂ ಗೇಟ್ ನಿಂದ ಸಾಗಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ
ಈ ಸಂದರ್ಭದಲ್ಲಿ ಅಧ್ಯಕ್ಷ ರಾಘವೇಂದ್ರ, ಕಾರ್ಯಾದರ್ಶಿ ಅಕ್ಬರ್ ಅಲಿ, ಜಿಲ್ಲಾ ಕಾರ್ಯಕಾರಿಣಿ ರಿಯಾಜ್, ಮಾಲೀಕರು ಕುಮಾರ, ನಾಗೇಶ, ನವೀನ, ಪ್ರಭಾಕರ ಸೇರಿದಂತೆ ವಾಹನ ಚಾಲಕರು ಇದ್ದರು.
ಬಾಳೆಹೊನ್ನೂರಿನಲ್ಲೂ ಪ್ರತಿಭಟನೆ:
ಕೇಂದ್ರ ಸರ್ಕಾರದ ಹೊಸ ಕಾನೂನಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲೂ ಪ್ರತಿಭಟನೆ ನಡೆಸಿದರು. ಅಕಸ್ಮಾತ್ ಅಫಘಾತ ಸಂಭವಿಸಿದಾಗ ಘಟನಾ ಸ್ಥಳದಲ್ಲೇ ಇದ್ದರೆ ಆಕ್ರೋಶಿತ ಜನರೇ ತಮ್ಮನ್ನು ಕೊಲ್ಲುವ ಅಪಾಯವಿದೆ. ಈ ಆತಂಕದಿಂದ ಅಲ್ಲಿಂದ ತಪ್ಪಿಸಿಕೊಂಡರೆ ನಂತರ 10 ವರ್ಷಗಳವರೆಗೆ ಶಿಕ್ಷೆ ಹಾಗೂ 7 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸುವ ಅವಕಾಶವನ್ನು ನೀಡಿರುವುದು ನಮ್ಮ ಬದುಕನ್ನೇ ಕಸಿಯುತ್ತದೆ. ಈ ಹೊಸ ಕಾನೂನನ್ನು ಕೇಂದ್ರವು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಚಿಕ್ಕಮಗಳೂರು: ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಆರೋಪಿ ಮತ್ತೆ ಪೊಲೀಸ್ ವಶಕ್ಕೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಎಂ ಕೆ ಪೂರ್ಣೇಶ್ ಎಸ್ಕೇಪ್ ಆಗಿದ್ದ, ಈ ಸಂಬಂಧ ಇದೀಗ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಏನಿದು ಘಟನೆ:
ಕಳೆದ ನವೆಂಬರ್ ನಲ್ಲಿ ಮನೆಯಲ್ಲಿರೋ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಪೊಲೀಸರ ಮೇಲೆ ಲಾಂಗ್ ಬೀಸಿದ, ಆತನ ಕಾಲಿನ ಮಂಡಿಗೆ ಫೈರಿಂಗ್ ಮಾಡಿದ್ದರು. ಫೈರಿಂಗ್ ವೇಳೆ ಪೂರ್ಣೇಶ್ ಬಲಗಾಲಿಗೆ ಗುಂಡು ತಗಲಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಮೂರು ದಿನಗಳ ಹಿಂದೆ ನಗರದ ಮಲ್ಲೇಗೌಡ ಆಸ್ಪತ್ರೆಯಿಂದ ಮುಂಜಾನೆ ಎಸ್ಕೇಪ್ ಆಗಿದ್ದ.
ಎಸ್ಕೇಪ್ ಆಗಿದ್ದ ಆರೋಪಿ ಪೂರ್ಣೇಶ್ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸಿ, ಇಂದು ಬೆಳಗ್ಗೆ 6:30 ಗಂಟೆ ಸಮಯದಲ್ಲಿ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಮಾಗಲ ಬ್ರಿಡ್ಜ್ ಕಡೆಯಿಂದ ಮಾಗಲಬಸ್ ನಿಲ್ದಾಣದ ಕಡೆ ಬರುತ್ತಿರುವಾಗ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ












