
ಪುತ್ತೂರು/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗಿನ ಜಾವ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಗೊಂದೊಳು ಪೂಜೆ ಸಲುವಾಗಿ ಶುಕ್ರವಾರ ರಾತ್ರಿ ವಿಟ್ಲ ಸಮೀಪದ ಪುಣಚಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಶನಿವಾರ ಮರಳುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿ ಸೇರಿದಂರೆ ಮೂವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಪುಣಚ ಬುಳೇರಿಕಟ್ಟೆಯಿಂದ ಹೊರಟ ಕಾರು ಒಳ ರಸ್ತೆಯಲ್ಲಿ ಸಾಗಿ ಪುತ್ತೂರು ಬೈಪಾಸ್ ಬಳಿ ಹೆದ್ದಾರಿಯನ್ನು ಸೇರುವ ಜಾಗದಲ್ಲಿ ಈ ಅಪಘಾತ ಸಂಭವಿಸಿದೆ.













