ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನಗರದ ಗೋಪಾಳದ ತುಳಸಿ ಬಡಾವಣೆಯ ನಿವಾಸಿಯೊಬ್ಬರ ಮನೆಯಲ್ಲಿ ಭಾರಿ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು, ಮನೆಯವರನ್ನು ಅಕ್ಷರಶಃ ಭಯಭೀತರನ್ನಾಗಿಸಿದ ಘಟನೆ ನಡೆದಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಬಡಾವಣೆಯ ನಿವಾಸಿ ವಿನಯ್ ಎಂಬುವರ ಮನೆಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಏಕಾಏಕಿ ಮನೆಯೊಳಗೆ ನುಗ್ಗಿದ ಹೆಬ್ಬಾವು ನೇರವಾಗಿ ಬಾತ್ ರೂಂ ಸೇರಿಕೊಂಡಿದೆ. ಭಾರಿ ಗಾತ್ರದ ಹಾವು ಇರುವುದನ್ನು ಕಂಡು ಮನೆಯವರೆಲ್ಲರೂ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಮನೆಯವರು ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸ್ನೇಕ್ ಕಿರಣ್ ಅವರು, ಬಾತ್ ರೂಂನಲ್ಲಿದ್ದ ಹೆಬ್ಬಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸೆರೆಹಿಡಿಯಲಾದ ಹೆಬ್ಬಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಇದರಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.












