ಶೃಂಗೇರಿ: ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶಾಲಾ ವಿದ್ಯಾರ್ಥಿಗಳು ಆರೋಗ್ಯ ಅರಿವನ್ನು ರಸಪ್ರಶ್ನೆ ಮೂಲಕ ಪಡೆದುಕೊಳ್ಳಬಹುದು ಎಂದು ಶ್ರೀ ಪಿಪಿ ಬೇಬಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕರೆ ನೀಡಿದರು.

 

ಇದನ್ನೂ ಓದಿ; ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್

ಆರೋಗ್ಯ ಇಲಾಖೆ ಸರ್ಕಾರಿ ಶಾಸಕರ ಮಾದರಿ ಪ್ರೌಢಶಾಲೆ ಮೆಣಸೆಯಲ್ಲಿ ನಡೆದ ಆರೋಗ್ಯ ಇಲಾಖೆ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಿಂದ ಬೇರೆ ಬೇರೆ ವಯೋಮಾನದವರಿಗೆ ಬೇರೆ ಬೇರೆ ಕಾರ್ಯಕ್ರಮಗಳ ನಡೆಸಿ ಸಾರ್ವಜನಿಕರಲ್ಲಿ ಆರೋಗ್ಯದ ಅರಿವನ್ನು ಉಂಟುಮಾಡುವುದರ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು ನಡೆಸಿ ನಗದು ಬಹುಮಾನವನ್ನು ನೀಡುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಪ್ರಬಂಧ ಸ್ಪರ್ಧೆಗಳು ನಡೆಸಿ ವಿಜೇತರನ್ನು ಆಯ್ಕೆ ಮಾಡಿ ಆರೋಗ್ಯದ ಅರಿವನ್ನು ಮೂಡಿಸಲಾಗುತ್ತಿದ್ದು, ವಿದ್ಯಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

 

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.09.2023

ಶಾಲಾ ಮುಖ್ಯೋಪಾಧ್ಯಾಯರಾದ ಗಂಗಾಧರಪ್ಪ ಮಾತನಾಡಿ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಒಂದೇ ನಾಣ್ಯದ ಎರಡು ಮುಖಗಳು ಸಮಾಜ ಸೇವೆಯೇ ಈ ಇಲಾಖೆಯ ಮುಖ್ಯ ಧ್ಯೇಯಗಳು ಆರೋಗ್ಯವೇ ಭಾಗ್ಯ ಎನ್ನುವ ಧ್ಯೇಯವನ್ನು ಹೆಸರಿಸಲು ಈ ರೀತಿಯ ಕಾರ್ಯಕ್ರಮಗಳು ಉಪಯೋಗವಾಗುತ್ತದೆ ಎಂದು ತಿಳಿಸಿದರು. ರಸಪ್ರಶ್ನೆ ಕಾರ್ಯಕ್ರಮದ ಮೂಲಕ ಬಹುಮಾನ ವಿತರಣೆಯ ಹೊರತುಪಡಿಸಿ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಜ್ಞಾನವನ್ನು ಪಡೆದುಕೊಳ್ಳಲು ಈ ಕಾರ್ಯಕ್ರಮ ಉತ್ತಮ ವೇದಿಕೆ ಎಂದು ತಿಳಿಸಿದರು.

 

ಇನ್ನು ಈ ರಸಪ್ರಸ್ನೆ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಅಮೃತ ಮತ್ತು ಹರ್ಷವರ್ಧನ್, ದ್ವಿತೀಯ ಬಹುಮಾನ ಸೃಷ್ಟಿ ಮತ್ತು ಶಾರ್ವರಿ, ತೃತೀಯ ಬಹುಮಾನವನ್ನು ನಾರಾಯಣ ಮತ್ತು ದಿಯ ಪಡೆದುಕೊಂಡರು.

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲವು ದಿನಗಳ ಹಿಂದೆ ಅತ್ಯಾಚಾರ ಯತ್ನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನರಸಿಂಹರಾಜಪುರ ವೈದ್ಯಾಧಿಕಾರಿ ಡಾ .ಎಲ್ಡೋಸ್ ಜಾಮೀನು ರದ್ದಾಗಿದ್ದು ಜೈಲು ಪಾಲಾಗಿದ್ದಾನೆ. ಇಂದು ವಿಚಾರಣೆ ನಡೆಸಿದ ನರಸಿಂಹರಾಜಪುರ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ.

ವರ್ಗೀಸ್ ಗೆ ಗೇಟ್ ಪಾಸ್ ಆದೇಶ:
ಘಟನೆ ನಂತರ ಡಾ. ವರ್ಗೀಸ್ ಅನ್ನು ನರಸಿಂಹರಾಜಪುರ ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ ಮಾಡಲಾಗಿತ್ತು. ಡಾ. ಎಲ್ಡೋಸ್ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354 ಅನ್ವಯ ಕೇಸ್ ದಾಖಲಾಗಿತ್ತು. ಬಳಿಕ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಂದು ವಿಚಾರಣೆ ನಡೆಸಿದ ನರಸಿಂಹರಾಜಪುರ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ.

 

ಘಟನೆಯ ವಿವರ:

ನೊಂದ ಮಹಿಳೆಯೂ ಇಲಾಖೆಯ ಡಿ ದರ್ಜೆ ಸಿಬ್ಬಂದಿ ಆಗಿದ್ದು ಬಾಳೆಹೊನ್ನೂರು ವಸತಿ ಗೃಹಕ್ಕೆ ಬರಲು ಹೇಳಿದ್ದನು, ಈತನ ಬಗ್ಗೆ ತಿಳಿದಿದ್ದ ಮಹಿಳೆ ತನ್ನ ಗಂಡ ಹಾಗೂ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದರು, ಬಾಳೆಹೊನ್ನೂರು ಪಟ್ಟಣದ ಸರ್ಕಾರಿ ವೈದ್ಯರ ವಸತಿಗೃಹದಲ್ಲಿ ಮಹಿಳೆಯೊಂದಿಗೆ ಏಕಾಂತ ಸಮಯ ಕಳೆಯಲು ತಯಾರಾಗಿದ್ದಾಗ ಮಹಿಳೆಯ ಪತಿ ಹಾಗೂ ಸಂಬಂಧಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದನು, ಈತನ ಘನಂದಾರಿ ಕೆಲಸಕ್ಕೆ ಸಾರ್ವಜನಿಕರು ಹಾಗೂ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದರು.

ಈತನ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ಸಂಬಂಧ ಈ ಹಿಂದೆಯೂ ಹಲವು ಆರೋಪಗಳು ಕೇಳಿಬಂದಿದ್ದವು, ನಾಯಿ ಬಾಲ ಡೊಂಕು ಎಂಬಂತೆ ತನ್ನ ಬುದ್ಧಿಯನ್ನು ಬಿಡದ ಕಾರಣ ಇಂದು ಡಾಕ್ಟರಪ್ಪ ಜೈಲು ಪಾಲಾಗಿದ್ದಾನೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.