ಕೊಪ್ಪ/ಶೃಂಗೇರಿ: HDK ವಿರುದ್ಧ ವರ್ಣಬೇಧ ಹೇಳಿಕೆ: ಜಮೀರ್ ವಿರುದ್ಧ ದೂರು: ಸಂಪುಟದಿಂದ ವಜಾಗೆ ಆಗ್ರಹ

ಕೊಪ್ಪ/ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ‘ಕರಿಯ’ ಎಂಬ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಎನ್ನುವವರು ಹರಿಹರಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತಿದ್ದ ವೇಳೆ ಭಾಷಣದ ಮಧ್ಯೆ ಜಮೀರ್​ ಅಹ್ಮದ್​ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ‘ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಡೇಂಜರ್​​’ ಎಂದು ಉರ್ದುವಿನಲ್ಲಿ ಹೇಳಿದ್ದರು. ಜಮೀರ್ ಈ ಹೇಳಿಕೆ ಜನಾಂಗಿಯ ನಿಂದನೆ ಎಂದು ಭಾರೀ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಇದೀಗ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ


ಶೃಂಗೇರಿ: ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ:
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕರಿಯ ಕುಮಾರಸ್ವಾಮಿ ಎಂದಿದ್ದು, ಒಕ್ಕಲಿಗ ಸಮುದಾಯದ ಭಾವನೆಗಳಿಗೆ ದಕ್ಕೆಯಾಗಿದೆ. ಎರಡೂ ಸಮುದಾಯಗಳ ನಡುವೆ ವಿಷಬೀಜವನ್ನು ಬಿತ್ತಿ ಸಮಾಜದ ಸ್ವಾಸ್ಥ್ಯವನ್ನು ಕದಡುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್‌ʼನನ್ನು ಸಂಪುಟದಿಂದ ವಜಾಗೊಳಿಸಿವಂತೆ ಯುವ ಒಕ್ಕಲಿಗರ ವೇದಿಕೆ, ತಾಲ್ಲೂಕು ಒಕ್ಕಲಿಗರ ಸಂಘ ಮತ್ತು ಜಿಲ್ಲಾ ಒಕ್ಕಲಿಗ ಸಂಘ ಶೃಂಗೇರಿ ವತಿಯಿಂದ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.