
ಹಾಸನ: (ನ್ಯೂಸ್ ಮಲ್ನಾಡ್ ವರದಿ) ರ‍್ಯಾಗಿಂಗ್ ಸಂಬಂಧ ನಗರದ ಚಿಕ್ಕಹೊನ್ನೇನಹಳ್ಳಿಯ ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, 18 ಹಿರಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ.
ರ‍್ಯಾಗಿಂಗ್ ವಿರೋಧಿಸಿ ಕಿರಿಯರು, ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಕಾರಣಕ್ಕೆ ಜಗಳ ಪ್ರಾರಂಭವಾಗಿದ್ದು, ಕೈಕೈ ಮಿಲಾಯಿಸುವ ಮಟ್ಟಕ್ಕೆ ತಲುಪಿತ್ತು. ಹಿರಿಯರು ಕಿರಿಯರ ಮೇಲೆ ಹಲ್ಲೆ ಮಾಡಿದ್ದರು. ಹಲವರು ಗಾಯಗೊಂಡಿದ್ದಾರೆ.

‘ಕಾಲೇಜಿನ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರಾಂಶುಪಾಲ ಡಾ.ನಟರಾಜ್ ತಿಳಿಸಿದರು.
















