ಶಿವಮೊಗ್ಗದ ರಾಗಿಗುಡ್ಡದಲ್ಲಿ ಭಯದ ವಾತಾವರಣ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ವಾತಾವರಣ ನೆಲೆಸಿದ್ದು, ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿರುವ ಗಲಾಟೆ ಪ್ರಕರಣ ಮಲೆನಾಡು ನಗರಿಯಲ್ಲಿ ಆತಂಕ ಮೂಡಿಸಿದೆ. ಪರಿಸ್ಥಿತಿ ಈಗಲೂ ಬಿಗುವಿನಿಂದ ಕೂಡಿದ್ದು, ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣಗಳು ನಡೆದಿವೆ. ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ರಾಗಿಗುಡ್ಡ ಶಾಂತಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದನ್ನು ಹೊರತುಪಡಿಸಿ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 144 ಸೆಕ್ಷನ್ ಮುಂದುವರಿದಿದೆ. ಹೀಗಾಗಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.

 

ಇದನ್ನೂ ಓದಿ; ನಿಮ್ಮ ಬಳಿ ಪಿಂಕ್‌ ನೋಟುಗಳಿದ್ದರೆ ಬದಲಿಸಿಕೊಳ್ಳಿ; 2000 ನೋಟುಗಳ ವಿನಿಮಯ ಅವಧಿ ಮತ್ತೆ ವಿಸ್ತರಣೆ

ರಾಗಿಗುಡ್ಡದಲ್ಲಿ ಕಲ್ಲು ತೂರಾಟದ ಬಳಿಕ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಆದರೆ ನಿಷೇಧಾಜ್ಞೆ ನಡುವೆಯೇ ಶಿವಮೊಗ್ಗ ನಗರದಲ್ಲಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನ ತೆರೆಯುತ್ತಿದ್ದು, ವ್ಯಾಪಕ ವಹಿವಾಟು ಆರಂಭಗೊಂಡಿದೆ.

 

ಇದನ್ನೂ ಓದಿ; ತಿಂಗಳ ಮೊದಲ ದಿನವೇ ಬ್ಯಾಡ್‌ ನ್ಯೂಸ್; ಸಿಲಿಂಡರ್​ ಬೆಲೆ ಮತ್ತೆ ಹೆಚ್ಚಳ

ಹಿಂದೂಗಳ ಮನೆ ಟಾರ್ಗೆಟ್:
ರಾಗಿಗುಡ್ಡದಲ್ಲಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.

 

ಇನ್ನು ಎಂಟು ಜನರು ತಲೆಮರೆಸಿಕೊಂಡಿದ್ದಾರೆ. 60 ಮಂದಿಯನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದ ಮಿಥುನ್ ಕುಮಾರ್, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು. ಇನ್ನು ಈ ಸಂಬಂಧ ಊಹಾಪೋಹ ಬೇಡ. ವಾಹನ ಯಾರದ್ದು, ವಾಹನದಲ್ಲಿ ಇದ್ದವರು ಯಾರು ಎಂದು ತನಿಖೆ ನಡೆಯುತ್ತಿದೆ. ಅವರನ್ನ ಕರೆತಂದು ವಿಚಾರಣೆ ಮಾಡುತ್ತೇವೆ ಎಂದರು.

ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿಲ್ಲ:
ರಾಗಿಗುಡ್ಡದಲ್ಲಿ 144 ಸೆಕ್ಷನ್ ಮುಂದುವರಿಯಲಿದೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಇದ್ದರೂ ವ್ಯಾಪಾರ ವಹಿವಾಟಿಗೆ ಸಮಸ್ಯೆ ಇಲ್ಲ. ಶಿವಮೊಗ್ಗ ನಗರದಲ್ಲಿ ಎಲ್ಲೂ ಕೂಡ ಅಂಗಡಿ ಬಂದ್ ಮಾಡಿಸಿಲ್ಲ. ಯಾರೂ ಭಯಪಡುವ ಅವಶ್ಯಕತೆ ಇಲ್ಲ, ಪೊಲೀಸರ ನಿಯೋಜಿಸಿದ್ದೇವೆ. ರಾಗಿಗುಡ್ಡ ಹೊರತುಪಡಿಸಿ ಶಿವಮೊಗ್ಗ ನಗರದಾದ್ಯಂತ ಸಹಜ ಸ್ಥಿತಿ ಇದೆ ಎಂದು ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

144 ಸೆಕ್ಷನ್ ತೆರವು ಮಾಡುವಂತೆ ಪಟ್ಟು:
ಇನ್ನು ನಿನ್ನೆ ಶಿವಮೊಗ್ಗ ನಗರದ ಸಂಪೂರ್ಣ ಸ್ತಬ್ಧವಾಗಿದ್ದ ಅಮೀರ್ ಅಹ್ಮದ್ ಸರ್ಕಲ್ ಬಳಿಯ ಹೂವಿನ ಮಾರುಕಟ್ಟೆ ಇಂದು ಓಪನ್ ಆಗಿದೆ. 144 ಸೆಕ್ಷನ್ ತೆರವು ಮಾಡಿ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ವರ್ತಕರು ಪಟ್ಟು ಹಿಡಿದಿದ್ದಾರೆ.

 

4 ವರ್ಷದ ಮಗು ಕೂದಲೆಳೆ ಅಂತರದಲ್ಲಿ ಪಾರು:
ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಮೆರವಣಿಗೆಯಲ್ಲಿದ್ದ ಜನರು ಸುತ್ತಮುತ್ತಲಿನ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದು, ಗಾಜುಗಳು ಪುಡಿ ಪುಡಿಯಾಗಿವೆ. ಅಲ್ಲದೆ ವಾಹನಗಳನ್ನು ಜಖಂಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕಲ್ಲು ತೂರಾಟದ ವೇಳೆ ಗಾಯಗೊಂಡ ಹಿಂದೂಗಳು ಟವಿ೯ ಮುಂದೆ ಘಟನೆಯ ಕರಾಳ ಕ್ಷಣಗಳನ್ನು ಬಿಚ್ಚಿಟ್ಟಿದ್ದಾರೆ.

ಲಕ್ಷ್ಮಣಗೌಡ ಮತ್ತು ಸುಚಿತ್ರಾ ಎಂಬುವರ ಮನೆ ಮೇಲೂ ಕಲ್ಲು ತೂರಲಾಗಿದೆ. ಮನೆಯಲ್ಲೇ ಇದ್ದ ಲಕ್ಷ್ಮಣಗೌಡ ದಂಪತಿ ಮತ್ತು ನಾಲ್ಕು ವರ್ಷದ ಮಗು ರಕ್ಷಿತಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾಳೆ. ರಕ್ಷಿತಾ ಪೋಷಕರು ಪ್ರಾಣ ಉಳಿದಿದ್ದೇ ಹೆಚ್ಚು ಎಂದು ನೋವು ಹೊರಹಾಕಿದ್ದಾರೆ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಆಟೋ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ಪಲ್ಟಿ ಹೊಡೆದು ಕಂದಕಕ್ಕೆ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೊಟ್ಟಿಗೆಹಾರದ ಅತ್ತಿಗೆರೆ ಸಮೀಪ ನಡೆದಿದ್ದು, ಇಬ್ಬರಿಗೆ ತೀವ್ರ ಪೆಟ್ಟಾಗಿದೆ.

ಜಾವಾಗಲ್ ನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಕೊಟ್ಟಿಗೆಹಾರ ದ ಅತ್ತಿಗೆರೆ ಸಮೀಪ ಈ ಅಪಘಾತ ನಡೆದಿದೆ. ಆಟೋದಲಿದ್ದ ಇಬ್ಬರಿಗೂ ತೀವ್ರ ಪೆಟ್ಟಾಗಿದ್ದು, ಬೆಳ್ತಂಗಡಿ ತಾಲೂಕಿನ ಆಟೋ ಚಾಲಕ ನಜೀರ್‌ನ ಸ್ಥಿತಿ ಗಂಭೀರವಾಗಿ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.