
ಅಕ್ರಮ ಗೋದಾಮಿನ ಮೇಲೆ ದಾಳಿ ಲಕ್ಷಾಂತರ ಮೊತ್ತದ ಕೀಟ ನಾಶಕ ಜಪ್ತಿ…!
ತರೀಕೆರೆ ಪಟ್ಟಣದ ಕುಂಭಾರ ಬೀದಿಯಲ್ಲಿರುವ ತೌಸೀಫ್ ಅಹಮದ್ s/o ನಝಿರ್ ಅಹಮದ್ ಎಂಬುವವರಿಗೆ ಸೇರಿದ ಲಕ್ಷಾಂತರ ಬೆಲೆಬಾಳುವ ಪರವನಾಗಿ ಇಲ್ಲದೆ ಅಕ್ರಮವಾಗಿ ಕೀಟನಾಶಕಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಜಂಟಿ ಕೃಷಿ, ನಿರ್ದೇಶಕರಾದ ಸುಜಾತ, ಹೆಚ್. ಎಲ್. ಇವರ ನೇತೃತ್ವದ ತಂಡ ದಾಳಿ ಮಾಡಿ ಶೋಧಕಾರ್ಯ ನಡೆಸಲಾಯಿತು.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!

ಈ ಸಂಧರ್ಭದಲ್ಲಿ 06 ಕಂಪನಿಗಳಿಗೆ ಸೇರಿದ ಒಟ್ಟು 5 ಲಕ್ಷ 71 ಸಾವಿರ ಮೌಲ್ಯದ ಕೀಟನಾಶಕಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದು ಕಂಡುಬಂದಿದ್ದು, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಕೀಟನಾಶಕಗಳನ್ನು ಜಪ್ತಿ ಮಾಡಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲು ಕ್ರಮವಹಿಸಲಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ದಾಳಿಯಲ್ಲಿ ಸಹಾಯಕ ಕೃಷಿ ನಿರ್ದೇಶಕರುಗಳಾದ ತಿಮ್ಮನಗೌಡ ಎಸ್ ಪಾಟೀಲ್, ಎಸ್ ವೆಂಕಟೇಶ ಚವ್ಹಾಣ್, ಕೃಷಿ ಅಧಿಕಾರಿ ಶ್ರೀನಿವಾಸ್ ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಶೃಂಗೇರಿ : ಬಿಜೆಪಿ ಮುಖಂಡನ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಟ್ವಿಸ್ಟ್
ಚಿಕ್ಕಮಗಳೂರು/ಶೃಂಗೇರಿ:(ನ್ಯೂಸ್ ಮಲ್ನಾಡ್ ವರದಿ) ಹಾಸನದಲ್ಲಿ ಲೈಂಗಿಕ ದೌರ್ಜನ್ಯದ ಕೇಸ್ ನಲ್ಲಿ MLC ಸೂರಜ್ ರೇವಣ್ಣ ಬಂಧನದ ಬೆನ್ನಲೇ ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡನ ವಿರುದ್ಧ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು, ಇಬ್ಬರು ಅಪ್ರಾಪ್ತ ಯುವಕರು ವೀಡಿಯೋ ಮೂಲಕ ಶೃಂಗೇರಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ ಅವರು ನಮ್ಮನ್ನು ಲೈಂಗಿಕವಾಗಿ ಬಳಸಿಕೊಂಡು ಬೆದರಿಕೆ ಹಾಕಿರುವುದಾಗಿ ಹೇಳಿಕೆ ನೀಡಿದ್ದರು, ಈ ವೀಡಿಯೊವನ್ನು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಸದಸ್ಯ ಶಬರೀಶ್ ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿದ್ದರು.
ಆ ನಂತರದಲ್ಲಿ ದೂರು ನೀಡಲು ಶೃಂಗೇರಿ ಪೊಲೀಸ್ ಠಾಣೆಗೆ ತೆರಳಿದ ಸಂದರ್ಭದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೇ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಬರೀಶ್ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು.
ಸಲಿಂಗ ಕಾಮ ಪ್ರಕರಣಕ್ಕೆ ಟ್ವಿಸ್ಟ್
ಸಲಿಂಗಕಾಮಕ್ಕೆ ಅಪ್ರಾಪ್ತ ಬಾಲಕರನ್ನ ಬಳಸಿಕೊಂಡ ಆರೋಪಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಬಾಲಕರಿಗೆ ಅನ್ಯಾಯವಾಗಿದೆ ಎಂದು ಆರೋಪ ಮಾಡಿದ್ದ ಶಬರೀಶ್ ವಿರುದ್ಧವೇ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ .
ವೈಯಕ್ತಿಕ ದ್ವೇಷಕ್ಕೆ ಲೈಂಗಿಕ ದೌರ್ಜನ್ಯದ ಆರೋಪ ಮಾಡುವಂತೆ ಬಾಲಕರಿಗೆ ಧಮ್ಕಿ ಹಾಕಿ ವೀಡಿಯೋ ಮಾಡಲಾಗಿದೆ ಎಂಬ ಆರೋಪದ ಮೇಲೆ ಶಬರೀಶ್ ವಿರುದ್ಧ ಪೋಕ್ಸೋ ಕೇಸ್ ದಾಖಲು ಮಾಡಲಾಗಿದೆ.
ಗ್ರಾಮ ಪಂಚಾಯತಿ ಸದಸ್ಯ ಶಬರೀಶ್, ಸೂರ್ಯ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಶಬರೀಶ್ ನನ್ನು ಬಂಧನ ಮಾಡಿದ್ದು ಮತ್ತೋರ್ವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಿನ್ನೆ ತಡರಾತ್ರಿ ಶಬರೀಶ್ ನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ
ಸೂರಜ್ ರೇವಣ್ಣ ಪ್ರಕರಣ ಹೊರ ಬರುತ್ತಿದ್ದಂತೆ ಬಾಲಕರನ್ನ ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡಲಾಗಿದೆ, ಹರೀಶ್ ಶೆಟ್ಟಿ – ಶಬರೀಶ್ ನಡುವೆ ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಲಾಗಿದೆ ಎಂದು ಆರೋಪಗಳು ಕೇಳಿಬಂದಿವೆ.













