ಹಿರೇಮಗಳೂರು ಕಣ್ಣನ್​​ ಗೆ ನೋಟಿಸ್ | ಎಚ್ಚೆತ್ತ ಸರ್ಕಾರ

ಬೆಂಗಳೂರು/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿ ಆಕ್ರೋಶಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಎಚ್ಚೆತ್ತುಕೊಂಡಿದೆ.

 

ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?

ಈ ಕುರಿತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆಸಿ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ತಿಳಿಸಿದರು. ಸ್ಥಳೀಯ ತಹಶೀಲ್ದಾರ್ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ಅದನ್ನು ಹಿಂಪಡೆಯುತ್ತೇವೆ ಎಂದರು.

ಇದನ್ನೂ ಓದಿ; 6 ಜಿಲ್ಲೆಗಳಲ್ಲಿ ಸರ್ಕಾರಿ ಉದ್ಯೋಗ; ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅಧಿಸೂಚನೆ; ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಸ್ವೀಕಾರ

ಏನಿದು ಘಟನೆ:
ಕನ್ನಡದಲ್ಲೇ ಮಂತ್ರ ಪಠಣ ಮಾಡುವ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದ ಹಿರೇಮಗಳೂರು ಕಣ್ಣನ್ ಅವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ ಸೂಚಿಸಲಾಗಿತ್ತು. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ತಹಶಿಲ್ದಾರ್ ಸುಮಂತ್ ನೋಟಿಸ್ ನೀಡಿದ್ದರು.

 

ಇದನ್ನೂ ಓದಿ; ಶೀಘ್ರವೇ ರೈತರಿಗೆ ಬರ ಪರಿಹಾರ ತಲುಪಿಸಲು ಅಧಿಕಾರಿಗಳಿಗೆ ಸೂಚನೆ

ಹಿರೇಮಗಳೂರು ಕಣ್ಣನ್ ಬೇಸರ:
ಈ ಕುರಿತು ಹಿರೇಮಗಳೂರು ಕಣ್ಣನ್ ಬೇಸರ ವ್ಯಕ್ತಪಡಿಸಿದ್ದು, 44 ವರ್ಷಗಳಿಂದ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯಕ್ಕೆ ಆದಾಯ ಇಲ್ಲ ಎಂದು ಸಂಬಳ ತಡೆಹಿಡಿದು, ಅರ್ಚಕರಿಗೆ ನೀಡಿದ ವೇತನ ವಾಪಸ್ ಕೇಳುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಸಿಹಿ ವಿತರಣೆ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಪ್ಪ ನಾಯಕ ವೃತ್ತದಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಎಸ್ ಪಿ ಸ್ಪಷ್ಟನೆ ಏನು?:
ಪೊಲೀಸರಿಂದ ಮಹಿಳೆಯ ಹಿನ್ನೆಲೆ, ಪೂರ್ವಾಪರ ಬಗ್ಗೆ ಪರಿಶೀಲನೆ ನಡೆಸಿದಾಗ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಬಗ್ಗೆ ಮಾಹಿತಿ ತಿಳಿದುಬಂದಿದೆ. ಮಾನಸಿಕ ರೋಗಕ್ಕೆ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆಯಿದ ಪೊಲೀಸರಿಗೆ ದಾಖಲೆಗಳ ಸಲ್ಲಿಕೆ ಮಾಡಲಾಗಿದ್ದು, 2018 ರಿಂದ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಎಸ್ ಪಿ ಮಿಥುನ್ ಕುಮಾರ್ ದೃಢಪಟ್ಟಿದ್ದಾರೆ.

ಇದನ್ನೂ ಓದಿ; ಈ ಯೋಜನೆಯ ಫಲಾನುಭವಿಗಳು 10 ಲಕ್ಷದ ವರೆಗೆ ಪಡೆಯಬಹುದು ವಿಮಾ ಕವರೇಜ್

ಘೋಷಣೆ ಕೂಗಿದ ಮಹಿಳೆ ತಂದೆಯಿಂದಲೂ ಸ್ಪಷ್ಟನೆ:

ನನ್ನ ಮಗಳು ಮೊದಲಿನಿಂದಲೂ ಸ್ವಲ್ಪ ಮಾನಸಿಕ ಅಸ್ವಸ್ಥಳಿದ್ದಾಳೆ. ಈ ಸಂಬಂಧ ಅವಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಕಳೆದ 10 ತಿಂಗಳಿನಿಂದ ಗಂಡನ ಮನೆ ಬಿಟ್ಟು ನನ್ನ ಮನೆಯಲ್ಲಿಯೇ ಇದ್ದಾಳೆ. ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಘಟನೆ ಕೇಳಿ ನನಗೂ ನೋವಾಗಿದೆ. ಅವಳು ಆ ತರಹದ ಹುಡುಗಿ ಅಲ್ಲ. ಅವಳು ಜಾತಿ ಭೇದ ಮಾಡಲ್ಲ. ಎಲ್ಲರನ್ನೂ ಒಂದೇ ತರ ನೋಡುತ್ತಾಳೆ. ಉದ್ದೇಶ ಪೂರಕವಾಗಿ ಅವಳು ಘೋಷಣೆ ಕೂಗಿಲ್ಲ ಎಂದು ಮಹಿಳೆಯ ತಂದೆ ಸಯ್ಯದ್ ಅಬ್ಬಾಸ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗ; 93 ಹುದ್ದೆಗಗಳಿಗೆ ಅರ್ಜಿ ಆಹ್ವಾನ

ಏನಿದು ಪ್ರಕರಣ?
ಐದು ದಶಕಗಳ ಕನಸು ಅಯೋಧ್ಯೆ ರಾಮ ಮಂದಿರ ಇಂದು ಲೋಕಾರ್ಪಣೆಗೊಂಡಿದೆ. ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಅದರಂತೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲೂ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿತ್ತು. ಜೈ ಶ್ರೀರಾಮ್ ಘೋಷಣೆಗಳು ಮೊಳಗುತ್ತಿದ್ದವು. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಲ್ಲದೆ, ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಪೊಲೀಸರಿಗೆ ಆವಾಜ್ ಹಾಕಿದ್ದಳು. ಪರಿಣಾಮವಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಹಿಂದೂ ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಲ್ಲದೆ, ಇನ್ನಷ್ಟು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಲಾರಂಭಿಸಿದರು. ಬಳಿಕ ಎಚ್ಚೆತ್ತ ಪೊಲೀಸರು, ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ ಜೀಪ್ ನಲ್ಲಿ ಕರೆದೊಯ್ದಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.