ಬಾಳೆಹೊನ್ನೂರು: ಅರಣ್ಯ ಒತ್ತುವರಿ ತೆರವಿಗೆ ರಂಭಾಪುರಿ ಶ್ರೀ ವಿರೋಧ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಜೀವನೋಪಾಯಕ್ಕಾಗಿ ಬಡವರು ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ


ಪರಿಸರ ಸಂರಕ್ಷಣೆಗೆ ವಿರೋಧವಿಲ್ಲ. ಆದರೆ, ಒತ್ತುವರಿ ತೆರವು ನೆಪದಲ್ಲಿ ಬಡವರಿಗೆ ತೊಂದರೆ ಕೊಡಬಾರದು. ಮಲೆನಾಡಿನಲ್ಲಿ ಬದುಕುತ್ತಿರುವ ಬಡ ಕುಟುಂಬಗಳು 1 ಅಥವಾ 2 ಎಕರೆ ಭೂಮಿ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ಮಾಹಿತಿ ನೀಡದೆ ಕಾಫಿ ಗಿಡಗಳನ್ನು ಕತ್ತರಿಸಿ ಹಾಕುತ್ತಿರುವುದು ನೋವಿನ ಸಂಗತಿ. ಸರ್ಕಾರ ಎಚ್ಚತ್ತುಕೊಂಡು ಈ ಕ್ರಮವನ್ನು ನಿಲ್ಲಿಸಲು ತಿಳಿಸಬೇಕು. ಬಡವರು ಒತ್ತುವರಿ ಮಾಡಿರುವ ಭೂಮಿ ಅರಣ್ಯ ವ್ಯಾಪ್ತಿಗೆ ಬರುವುದಾದರೆ ಅರಣ್ಯ ಹಕ್ಕು ಕಾಯ್ದೆಯಡಿ ಸಕ್ರಮ ಮಾಡಿಕೊಡಲಿ ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್; ಇಂತಹವರ ರೇಷನ್ ಕಾರ್ಡ್ ರದ್ದು, ದಂಡದ ಜೊತೆ ಕ್ರಿಮಿನಲ್ ಕೇಸ್ ದಾಖಲು


ಸಾವಿರಾರು ಎಕರೆ ಒತ್ತುವರಿ ಮಾಡಿರುವ ಭೂಮಾಲೀಕರು, ಕಾರ್ಪೊರೇಟ್ ಕಂಪನಿಗಳು ಮತ್ತು ಗಣಿಗಾರಿಕೆ ಮಾಡುತ್ತಿರುವವರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಕೇವಲ ಬಡವರು ಒತ್ತುವರಿ ಮಾಡಿರುವ ಭೂಮಿ ಮೇಲೆ ಇಂಥ ಕಠಿಣ ಕ್ರಮ ಒಳ್ಳೆಯದಲ್ಲ. ಅರಣ್ಯ ಮತ್ತು ಕಂದಾಯ ಇಲಾಖೆಯವರು ವಿಷಯವನ್ನು ಸರಿಯಾಗಿ ಪರಾಂಬರಿಸಿ ಬಡವರ ಒತ್ತುವರಿ ಕೈ ಬಿಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಶೇ. 80 ರಿಂದ ಶೇ.90% ರಷ್ಟು ಸಹಾಯಧನ


ಸರ್ಕಾರ ಹಠಮಾರಿತನ ಮುಂದುವರಿಸಿದರೆ ಮಲೆನಾಡಿನಲ್ಲಿ ಉಗ್ರ ಹೋರಾಟ ನಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಸರ್ಕಾರ ಬಡವರ ಒತ್ತುವರಿ ಭೂಮಿ ತೆರವುಗೊಳಿಸುವುದನ್ನು ಸ್ಥಗಿತಗೊಳಿಸುವಂತೆ ರಂಭಾಪುರಿ ಜಗದ್ಗುರು ಮತ್ತೊಮ್ಮೆ ಸರ್ಕಾರಕ್ಕೆ ಎಚ್ಚರಿಸಿದರು.


ಇದನ್ನೂ ಓದಿ: ಇಂಡಿಯನ್ ಬ್ಯಾಂಕ್ ನಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ; 48,000 ಸಂಬಳ, ವಿದ್ಯಾರ್ಹತೆ ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.