ಚಿಕ್ಕಮಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 24-09-2025 ಬುಧವಾರದಂದು ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.


ಇದನ್ನೂ ಓದಿ: ಮತ್ತೊಮ್ಮೆ ವಿದ್ಯುತ್ ದರ ಏರಿಕೆ;  ರಾಜ್ಯದ ಜನತೆಗೆ ಕರೆಂಟ್ ಶಾಕ್


24-09-2025 ರಿಂದ 26-09-2025ರ ವರೆಗೆ ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, 24-09-2025 ಬುಧವಾರದಂದು ಬೆಳಿಗ್ಗೆ 10-00 ರಿಂದ ಮದ್ಯಾಹ್ನ 1-30 ರವರೆಗೆ ಮತ್ತು ಮಧ್ಯಾಹ್ನ 2-30 ರಿಂದ ಸಂಜೆ 5-00 ಗಂಟೆಯವರೆಗೆ ಕುವೆಂಪು ಕಲಾ ಮಂದಿರ, ಕೆ.ಎಸ್.ಆರ್.ಟಿ.ಸಿ. ಬಸ್ ‌ ನಿಲ್ದಾಣದ ಹಿಂಭಾಗ, ಚಿಕ್ಕಮಗಳೂರು ಇಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!


ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರ ಮುಂದೆ ಅರ್ಜಿ ನಮೂನೆ-1 ಮತ್ತು ನಮೂನೆ-2ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಬಿಗ್ ಬಿಲಿಯನ್ ಡೇಸ್ ಸೇಲ್​ನಲ್ಲಿ ಐಫೋನ್​ಗಳ ಡಿಸ್ಕೌಂಟ್ ಬೆಲೆ ಪ್ರಕಟ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.