ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡರಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ

ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ ಮಾಡಿ ಇಬ್ಬರು ಆರೋಪಿಗಳು ಕೊಲೆ ಮಾಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…












