ಮೂಡಿಗೆರೆ: ಸರ್ಕಾರಿ ರಸ್ತೆ ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿದ್ದ ಬೇಲಿ ತೆರವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿದ್ದ ಬೇಲಿಯನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದ ಸಮೀಪ ಸಾರ್ವಜನಿಕರ ಉಪಯೋಗಕ್ಕಾಗಿ ಬಳಸುವ ಸರ್ಕಾರಿ ರಸ್ತೆಯನ್ನು ಇಬ್ಬರು ವ್ಯಕ್ತಿಗಳು ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿದ್ದ ಬೇಲಿಯನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 101ರಲ್ಲಿರುವ ಸರ್ಕಾರಿ ರಸ್ತೆ ಕೆಂಜಿಗೆಯಿಂದ ಬಿದರಹಳ್ಳಿ, ಲೋಕವಳ್ಳಿ ಮತ್ತು ಲೋಕವಳ್ಳಿ ಎಸ್ಟೇಟ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವೇಣುಗೋಪಾಲ ಮತ್ತು ವಿನಯ್ ಎಂಬುವರು ಒತ್ತುವರಿ ಮಾಡಿ, ಅಕ್ರಮವಾಗಿ ಬೇಲಿ ನಿರ್ಮಿಸಿದ್ದರು. ಇದರಿಂದ ಬಿದರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಂಪ್‌ಹೌಸ್‌ಗೆ ತೆರಳಲು, ಅನೇಕ ಹಿಡಿವಳಿ ಜಮೀನಿಗೆ ತೆರಳಲು, ಅಕ್ಕಪಕ್ಕದ ಗ್ರಾಮದ ಜನರು ಹಾಗೂ ಜಾನುವಾರುಗಳು ತಿರುಗಾಡಲು ತೊಂದರೆ ಉಂಟಾಗಿತ್ತು.

ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?

ಈ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಯಾದ ಬಿ.ಡಿ.ರಾಧಕೃಷ್ಣ, ಬಿ.ಡಿ.ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಕಳೆದ ನವೆಂಬರ್‌ನಲ್ಲಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಹಸೀಲ್ದಾರರಿಗೆ ಸೂಚಿಸಲಾಗಿತ್ತು. ಅದರಂತೆ ತಹಸೀಲ್ದಾರ್ ಎಸ್.ಅಶ್ವಿನಿ ಆದೇಶದ ಮೇರೆಗೆ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾಖಲೆಗಳ ಪರಿಶೀಲನೆಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಬೇಲಿ ನಿರ್ಮಿಸಿರುವುದು ದೃಢಪಟ್ಟಿದ್ದ ಹಿನ್ನಲೆಯಲ್ಲಿ ಅಕ್ರಮ ಬೇಲಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದರು.

ತೆರವು ಕಾರ್ಯಚರಣೆಯಲ್ಲಿ ಆರ್‌ಐ ಚಂದ್ರಶೇಖರ್, ವಿಎ ಕವನ್, ಬಿದರಹಳ್ಳಿ ಪಿಡಿಒ ದುಗ್ಗಮ್ಮ, ಗ್ರಾಮ ಸಹಾಯಕ ಕೆಂಚಯ್ಯ, ಗ್ರಾ.ಪಂ. ಅಧ್ಯಕ್ಷ ಯೋಗೇಶ್, ನಿರ್ದೇಶಕರು, ವಾಟರ್ ಮ್ಯಾನ್ ಸೇರಿದಂತೆ ಗ್ರಾ.ಪಂ. ಸಿಬ್ಬಂದಿ ಇದ್ದರು. (ವರದಿ- ತನು ಕೊಟ್ಟಿಗೆಹಾರ)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.