ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಯನ್ನ ವರ್ಗಾವಣೆ ಮಾಡುವಂತೆ ಮನವಿ

ಚಿಕ್ಕಮಗಳೂರು/ಬೆಳ್ತಂಗಡಿ: (ನ್ಯೂಸ್ ಮಲ್ನಾಡ್ ವರದಿ) ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಬೆಳ್ತಂಗಡಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಜಿಲ್ಲಾ ಉಪಾಧ್ಯಕ್ಷ ಹಾಗೂ ತಾಲೂಕು ಅಧ್ಯಕ್ಷ ಪ್ರದೀಪ್ ಕುಮಾರ್ ಸಿ ಉಪ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.


ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – 30 ಸಾವು; ಕ್ಷಣಾರ್ಧದಲ್ಲಿ ಸ್ಥಳಕ್ಕೆ ತಲುಪಿದ ಸೇನೆ, ಪೊಲೀಸ್, ಹಾಗೂ ವೈದ್ಯರ ತಂಡ ; ತಪ್ಪಿದ ಮಹಾ ದುರಂತ


ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಸರ್ಕಾರದ ಕಾನೂನು/ಸುತ್ತೋಲೆಗಳ ವಿರುದ್ದವಾದ ನಡವಳಿಕೆಗಳು ಹಾಗೂ ನಿಯಮಬಾಹಿರ ಆದೇಶಗಳು ಹಾಗೂ ನಡವಳಿಕೆಗಳ ಕಾರಣದಿಂದಾಗಿ ರಾಜ್ಯಾದ್ಯಂತ ಕಂದಾಯ ಇಲಾಖೆಯ ಆಧಾರ ಸ್ತಂಭವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರದ ಎಲ್ಲಾ ಜನಪರ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ಗೌರವಕ್ಕೆ ಧಕ್ಕೆಯಾಗಿದೆ.


ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್


ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಾತಂತ್ರ್ಯ ಪೂರ್ವದ ಬ್ರಿಟೀಷ್ ಆಳ್ವಿಕೆ ಮಾದರಿಯನ್ನು ಜೀವಂತವಾಗಿರಿಸಿ ದುರಾಡಳಿತ ನಡೆಸುತ್ತಿರುವ ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಅವರನ್ನು ಕೂಡಲೇ ಜಿಲ್ಲೆಯಿಂದ ವರ್ಗಾಯಿಸಿ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಗೆ ಜಿಲ್ಲಾಧಿಕಾರಿ/ಅಪರ ಜಿಲ್ಲಾಧಿಕಾರಿಯಾಗಿ ಸ್ಥಳನಿಯುಕ್ತಿಗೊಳಿಸದೇ ಸದರಿಯವರು ಮಾಡಿರುವ ಕಾನೂನು ಬಾಹಿರ ಮತ್ತು ಅಧೀನ ನೌಕರ ವಿರೋಧಿ ಆದೇಶಗಳನ್ನು ವಿಚಾರಣೆ ನಡೆಸಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಂಡು ಈ ವೃಂದದ 9000 ನೌಕರರಿಗೆ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಆದೇಶಗಳ ವಿರುದ್ದವಾಗಿ ತೆಗೆದುಕೊಂಡಿರುವ ಕ್ರಮಗಳನ್ನು ರದ್ದುಪಡಿಸುವವರೆಗೆ ಹಾಗೂ ಇಬ್ಬರನ್ನು ವರ್ಗಾವಣೆ ಮಾಡದಿದ್ದಲ್ಲಿ ಫೆ.03 ರಿಂದ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬಗೆಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ. ತಾಲ್ಲೂಕು ಕಛೇರಿ/ಜಿಲ್ಲಾಧಿಕಾರಿಗಳ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ;  ಇ-ಖಾತಾ ಇಲ್ಲದವರಿಗೆ ಬಿ-ಖಾತಾ ವಿತರಣೆ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.