
ಶೃಂಗೇರಿ/ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಸಿಇಟಿ ವೇಳೆ ಶಿವಮೊಗ್ಗ ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ಕೆಲವು ವಿದ್ಯಾರ್ಥಿಗಳ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ಒತ್ತಡ ಹೇರಿದ ಅಧಿಕಾರಿಗಳ ವರ್ತನೆಯನ್ನು ಶೃಂಗೇರಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಹಾಗೂ ಬಾಳೆಹೊನ್ನೂರು ಬ್ರಾಹ್ಮಣ ಮಹಾ ಸಭಾ ಖಂಡಿಸಿದ್ದಾರೆ.

ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ

ಸಿ.ಇ.ಟಿ. ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ಬಿಚ್ಚಿ ಪರೀಕ್ಷಾ ಕೊಠಡಿ ಪ್ರವೇಶಿಸಬೇಕೆಂಬ ನಿರ್ಬಂಧ ಹೇರಿರುವ ಪೊಲೀಸ್ ಅಧಿಕಾರಿಗಳ ಕ್ರಮ ಅತ್ಯಂತ ಹೇಯ ಕೃತ್ಯ ಮಾತ್ರವಲ್ಲ. ಸನಾತನ ಪರಂಪರೆಯ ಹಿಂದು ಸಂಸ್ಕೃತಿಗೆ ಮಾಡಿರುವ ಅಪಚಾರ. ಹೀಗೆ ಮಾಡಿರುವುದು ಒಂದು ಧರ್ಮದ ವಿರುದ್ಧ ಇರುವ ಅಸಹಿಷ್ಣುತೆಯನ್ನು ಸೂಚಿಸುತ್ತದೆ. ಬ್ರಾಹ್ಮಣರ ಧಾರ್ಮಿಕ ಭಾವನೆಗೆ ತೀವ್ರತರವಾದ ಧಕ್ಕೆ ಉಂಟಾಗಿರುತ್ತದೆ.

ಜನಿವಾರ ತೆಗೆಸುವುದು ಕೆಇಎ ನಿಯಮದಲ್ಲಿಲ್ಲದಿದ್ದರೂ ಸಹ ಬೀದರ್‌ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಬರೆಯಲು ಅವಕಾಶ ಕೊಡದ ಮತ್ತು ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಜನಿವಾರವನ್ನು ಕಿತ್ತೆಸೆದ ಕ್ರಮವು ಬ್ರಾಹ್ಮಣ ಸಮುದಾಯಕ್ಕೆ ಮಾಡಿರುವ ಅವಮಾನವಾಗಿರುತ್ತದೆ. ಇದನ್ನು ಶೃಂಗೇರಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಬಲವಾಗಿ ಖಂಡಿಸುತ್ತದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
ಹೀಗೆ ಮಾಡಿರುವ ಅಧಿಕಾರಿಗಳನ್ನು ಈ ಕೂಡಲೇ ಬಂಧಿಸಿ. ಸಮಗ್ರ ತನಿಖೆ ನಡೆಸಿ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಹಾಗೂ ಅವಕಾಶ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕಾಗಿ ಹಾಗೂ ಇನ್ನು ಮುಂದೇ ಈ ರೀತಿಯ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಸೂಕ್ತ ಮಾರ್ಗಸೂಚಿಗಳನ್ನು ಅಧಿಕಾರಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ನೀಡಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಅಗ್ರಹಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಶೃಂಗೇರಿ ತಹಸೀಲ್ದಾರ್ ಮೂಲಕ ಶೃಂಗೇರಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಮನವಿ ಪತ್ರ ಸಲ್ಲಿಸಿದ್ದಾರೆ. ಹಾಗೆಯೇ ಬಾಳೆಹೊನ್ನೂರು ಬ್ರಾಹ್ಮಣ ಮಹಾ ಸಭಾ ವತಿಯಿಂದ ಬಾಳೆಹೊನ್ನೂರು ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ
















