
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮೈಲುತುತ್ತು ಮತ್ತು ರಸಗೊಬ್ಬರಗಳು ಗುಣಮಟ್ಟ ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗಳು ಪರಿಶೀಲಿಸಬೇಕು ಎಂದು ತಾಲೂಕು ರೈತ ಸಂಘದ ಪದಾಧಿಕಾರಿಗಳು ಸೋಮವಾರ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆ ಶಿರಸ್ತೇದಾರ್ ಪ್ರವೀಣ್ ಕುಮಾರ್‌ಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಮನವಿ ಪತ್ರದಲ್ಲಿ ಏನಿದೆ?;
ತಾಲೂಕಿನಲ್ಲಿ ಪರವಾನಗಿ ಪಡೆದ ಅಂಗಡಿಗಳಲ್ಲಿ ಮೈಲುತುತ್ತು ಮತ್ತು ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ರೈತರು ಅಡಿಕೆ, ಕಾಫಿ, ಕಾಳುಮೆಣಸು ಬೆಳೆಗಳಿಗೆ ಮೈಲುತುತ್ತು ಹಾಗೂ ರಸಗೊಬ್ಬರಗಳನ್ನು ಬಳಕೆ ಮಾಡುತ್ತಿದ್ದಾರೆ. ಆದರೂ ಬೆಳೆಗಳು ಕೊಳೆರೋಗಕ್ಕೆ ತುತ್ತಾಗುತ್ತಿವೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಹೀಗಾಗಿ ಸಂಬಂಧಪಟ್ಟ ಇಲಾಖೆಗಳು ಪ್ರಯೋಗಾಲಯಗಳಲ್ಲಿ ಅವುಗಳ ಗುಣಮಟ್ಟ ಪರಿಶೀಲಿಸುವ ಅಗತ್ಯವಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ರೈತರಿಗೆ ವಿತರಿಸಬೇಕು. ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?













