ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಹರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಮಿತ ಎಸ್, ಜೂನ್ 28 ರಂದು ವಸತಿ ಶಾಲೆಯ ಸ್ನಾನ ಗೃಹದಲ್ಲಿ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಳು. ಇದಕ್ಕೂ ಮೊದಲು ಇದೆ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿಯ ಅಮೂಲ್ಯ ಎನ್. ಎಮ್. 27.07.2023 ರಂದು ವಸತಿ ಶಾಲೆಯಲ್ಲಿ ನೇಣು ಬೀಗಿದುಕೊಂಡು ಮೃತಪಟ್ಟಿದ್ದಳು.
ಈ ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿ ವರದಿ ಪಡೆಯಲು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಶೋಭ ಎಸ್, ಇವರನ್ನು ತನಿಖಾಧಿಕಾರಿಯನ್ನಾಗಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಶ್ರೀಮತಿ ಕೆ.ಪಿ.ಶೈಲಾ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ












