ಕಡೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆಗೆ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಸೈನಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡಿಕೊಪ್ಪಲು ಗ್ರಾಮದ ನಿವಾಸಿ ಹಾಗೂ ನಿವೃತ್ತ ಸೈನಿಕ ನಟೇಶ್ (46) ಮೃತರು.
ಗುರುವಾರ ಕಂಚುಗಾರನಹಳ್ಳಿಯಲ್ಲಿ ಅವರ ತಂದೆ ನಿಧನರಾಗಿದ್ದ ಹಿನ್ನೆಲೆಯಲ್ಲಿ ಬಂಡಿಕೊಪ್ಪಲುದಿಂದ ಬೈಕ್‌ನಲ್ಲಿ ಕಂಚುಗಾರನಹಳ್ಳಿಗೆ ತೆರಳುತ್ತಿದ್ದ ವೇಳೆ ನಾಗೇನಹಳ್ಳಿ ಸಮೀಪ ಈ ಅವಘಡ ಸಂಭವಿಸಿದೆ. ರಸ್ತೆಗೆ ಅಡ್ಡ ಬಂದ ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದಾಗ ಬೈಕ್‌ನ ನಿಯಂತ್ರಣ ತಪ್ಪಿ ಅವರು ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟೇಶ್ ಅವರನ್ನು ಮೊದಲು ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














