ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಭತ್ತ ಕಟಾವು ಮಾಡುವ ಯಂತ್ರವೊಂದು ಆಕಸ್ಮಿಕವಾಗಿ ಪಲ್ಟಿಯಾಗಿ ಕೆಲಕಾಲ ವಾಹನಗಳ ಓಡಾಟಕ್ಕೆ ಅಡಚಣೆ ಉಂಟಾಗಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಇಂದು ನಡೆದಿದೆ.
ಇದನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ

ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಟ್ರಾಕ್ಟರ್ನಲ್ಲಿ ಸಾಗಿಸುತ್ತಿದ್ದ ಭತ್ತ ಕಟಾವು ಮಾಡುವ ಯಂತ್ರವೊಂದು ಆಕಸ್ಮಿಕವಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ರಸ್ತೆಯಲ್ಲಿ ಕೆಲಕಾಲ ವಾಹನಗಳ ಓಡಾಟಕ್ಕೆ ಅಡಚಣೆ ಉಂಟಾಯಿತು.
ಘಟನೆ ಮಾಹಿತಿ ತಿಳಿದು ಸ್ಥಳೀಯರು ಹಾಗೂ ವಾಹನ ಸವಾರರು ಸ್ಥಳಕ್ಕೆ ಆಗಮಿಸಿ, ಯಂತ್ರವನ್ನು ರಸ್ತೆ ಬದಿಗೆ ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸಿದರು.
ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ















