ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ದ್ವಿಚಕ್ರ ವಾಹನ ಸವಾರನಿಗೆ ಮೂಡಿಗೆರೆ ನ್ಯಾಯಾಲಯ 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಜೂನ್ 2 ರಂದು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿಯವರು ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ತಡೆದು ದಾಖಲೆಗಳನ್ನು ಪರಿಶೀಲಿಸಿದರು. ಬೈಕ್ ಚಾಲನೆ ಮಾಡುತ್ತಿದ್ದ ರುದ್ರೇಶ್ ನಾಯ್ಕ ಎಂಬ ವ್ಯಕ್ತಿಯು ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಜೊತೆಗೆ ಹೊಗೆ ತಪಾಸಣೆ , ಡಿ.ಎಲ್. ಸೇರಿದಂತೆ ಬೈಕ್ ಗೆ ಸೂಕ್ತ ದಾಖಲೆ ಹೊಂದಿಲ್ಲದಿರುವುದು ಕಂಡು ಬಂದಿತ್ತು. ಈ ಹಿನ್ನಲೆಯಲ್ಲಿ ಬೈಕ್ ಸವಾರನ ಮೇಲೆ ಕೇಸು ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೂಡಿಗೆರೆ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾದೀಶರು ಬೈಕ್ ಚಾಲಕನಿಗೆ 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ












