ಹೆಬ್ರಿ/ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಪಘಾತದಲ್ಲಿ ರಾಷ್ಟೀಯ ಸ್ವಯಂ ಸೇವಕ ಸಂಘದ ಕಾರ್ಯವಾಹ, ದಾರುಣವಾಗಿ ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ

ಶನಿವಾರ ರಾತ್ರಿಯ ವೇಳೆ ಉಡುಪಿ ಜಿಲ್ಲೆಯ ಹೆಬ್ರಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ರಾಹುಲ್ ಶಿವಪುರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ವಿಧಿಯಾಟ ಬೇರೆಯೇ ಇತ್ತು. ಚಿಕಿತ್ಸೆ ಫಲಿಸದೇ ನಿನ್ನೆ ಬೆಳಗ್ಗೆ 7.15 ರ ಸುಮಾರಿಗೆ ರಾಹುಲ್ ಶಿವಪುರ ತನ್ನ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಮೂಲತಃ ಉಡುಪಿ ಜಿಲ್ಲೆಯ ಹೆಬ್ರಿ ಮೂಲದ ರಾಹುಲ್ ಶಿವಪುರ ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಓರ್ವ ಸ್ವಯಂಸೇವಕನಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. 25ರ ಹರೆಯದ ರಾಹುಲ್ ಸಂಘಟನೆ ಮಾಡುವುದರಲ್ಲಿ ಅತ್ಯಂತ ನಿಸ್ಸೀಮ. ಸಂಘ ನೀಡಿದ ಶಿಕ್ಷಣವನ್ನು ಶ್ರದ್ಧೆಯಿಂದ ಪಾಲಿಸುತ್ತಿದ್ದವರ ಪೈಕಿ ಈತನೂ ಓರ್ವ. ಸಂಘದ ಮಹತ್ತರ ಜವಾಬ್ದಾರಿಗಳನ್ನು ನಿಭಾಯಿಸುತ್ತಾ ಬಂದಿದ್ದ ರಾಹುಲ್ ಅತೀ ಚಿಕ್ಕ ವಯಸ್ಸಿನಲ್ಲೇ ಹೆಬ್ರಿ ತಾಲೂಕಿನ ಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ: SBI ಯಲ್ಲಿ ಜಾಬ್ ಆಫರ್; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್ ಇಲ್ಲಿದೆ
ಐಟಿಐ ನಂತರ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಉಡುಪಿಯ ಅತ್ರಾಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್,
ರಾಷ್ಟೀಯ ಸ್ವಯಂ ಸೇವಕ ಸಂಘ, ವೀರಾಂಜನೇಯ ಸೇವಾ ಸಮಿತಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದ ರಾಹುಲ್ ವಿಧಿಯ ಅಟ್ಟಹಾಸಕ್ಕೆ ಬಲಿಯಾಗಿರುವುದು ಅಪಾರವಾದ ಸ್ನೇಹಿತವರ್ಗ ಹಾಗೂ ಕುಟುಂಬಕ್ಕೆ ತುಂಬಲಾರದ ನೋವಾಗಿದೆ.
ಇದನ್ನೂ ಓದಿ: ಇ-ಖಾತೆ ಪಡೆಯುವವರ ಗಮನಕ್ಕೆ; ಬಿಗ್ ಅಪ್ಡೇಟ್ ಇಲ್ಲಿದೆ ನೋಡಿ
ರಾಹುಲ್ ಸಾವಿನ ಕುರಿತು ಸಂಘ ಪರಿವಾರದ ಅನೇಕ ಹಿರಿಯರು, ಅಪಾರವಾದ ಸ್ನೇಹಿತ ವರ್ಗ ಹಾಗೂ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.












