ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರಮನೆ ಕಡೆಗೆ ಸಾಗುವ ಕೋಡೆಬೈಲ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತು ಜಮೀನು ಕುಸಿತದ ಪರಿಣಾಮವಾಗಿ ರಸ್ತೆ ಸಂಪೂರ್ಣ ಹಾನಿಗೊಳಗಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ರಸ್ತೆಯಲ್ಲಿ ಗುಂಡಿಗಳು ಉಂಟಾಗಿದ್ದು, ಕಲ್ಲು ಕುಸಿತ ಹಾಗೂ ಹಾದಿ ಜಾರಿಕೆಯಿಂದ ವಾಹನ ಸಂಚಾರ ಅಸಾಧ್ಯವಾಗಿದೆ. ರಸ್ತೆ ಹಾಳಾಗಿ ಹಲವು ದಿನಗಳಿಂದ ವಾಹನಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ತುರ್ತು ಸೇವೆಗಳೂ ತಲುಪಲು ಕಷ್ಟವಾಗಿದೆ ಎಂದು ಗ್ರಾಮಸ್ತ ರಾಜು ಹೇಳಿದ್ದಾರೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ
ಸ್ಥಳೀಯರು ಸದ್ಯ ನಡೆದು ಸಂಚರಿಸುತ್ತಿದ್ದಾರೆ. ಮಳೆ ಮುಂದುವರೆದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಆತಂಕ ವ್ಯಕ್ತವಾಗಿದೆ. ಗ್ರಾಮಸ್ಥರು ರಸ್ತೆ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)












