ಈ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 400 ಕೋಟಿ ಬಿಡುಗಡೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಇತ್ತೀಚೆಗಷ್ಟೇ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆ ಅಭಿವುದ್ಧಿ ಮಾಡಲಾಗುತ್ತದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿತ್ತು. ಇದೀಗ ಮೂಡಿಗೆರೆಯಿಂದ ಮೂಗುತಿಹಳ್ಳಿವರೆಗಿನ ರಾಷ್ಟ್ರೀಯ ಹೆದ್ದಾರಿ-173 ವಿಸ್ತರಣೆಗಾಗಿ 400 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

 

ಇದನ್ನೂ ಓದಿ; ಕರ್ನಾಟಕ ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ; ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಸಲ್ಲಿಸಿ

26 ಕಿಲೋ ಮೀಟರ್ ಹೆದ್ದಾರಿಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತನೆ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿ-173 ಚಿಕ್ಕಮಗಳೂರು, ಕಡೂರು ಮತ್ತು ಹೊಳಲ್ಕೆರೆ ಸೇರಿದಂತೆ ಪ್ರಮುಖ ನಗರಗಳ ಹೆದ್ದಾರಿಗಳನ್ನು ಸಂಪರ್ಕಿಸುತ್ತದೆ ಎಂದು ಅವರು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ FIR ದಾಖಲು

ಸದ್ಯದಲ್ಲೇ ಕಾಮಗಾರಿ ಆರಂಭ:
ರಾಷ್ಟ್ರೀಯ ಹೆದ್ದಾರಿ-173 ಚಿಕ್ಕಮಗಳೂರು, ಕಡೂರು ಮತ್ತು ಹೊಳಲ್ಕೆರೆ ಸೇರಿದಂತೆ ಪ್ರಮುಖ ನಗರಗಳ ಹೆದ್ದಾರಿಗಳನ್ನು ಸಂಪರ್ಕಿಸಲಿದ್ದು, ಚಿಕ್ಕಮಗಳೂರು ತಾಲ್ಲೂಕಿನ ಮೂಗಿಹಳ್ಳಿಯಿಂದ ಮೂಡಿಗೆರೆವರೆಗೆ ರಸ್ತೆ ವಿಸ್ತರಣೆ ಆಗಲಿದೆ. ಈಗಾಗಲೇ ಕಡೂರಿನಿಂದ ಚಿಕ್ಕಮಗಳೂರಿನ ಮೂಗ್ತಿಹಳ್ಳಿವರೆಗೆ ರಸ್ತೆ ವಿಸ್ತರಣೆ ಆಗಿದ್ದು, ದ್ವಿಪಥ ರಸ್ತೆಯಾಗಿ ಪರಿವರ್ತನೆ ಆಗಿದೆ. ಇದೀಗ ಮೂಗ್ತಿಹಳ್ಳಿಯಿಂದ ಮೂಡಿಗೆರೆ ವರೆಗಿನ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಕಾಮಗಾರಿಯೂ ಸದ್ಯದಲ್ಲಿಯೇ ಪ್ರಾರಂಭವಾಗಲಿದೆ ಎನ್ನಲಾಗಿದೆ.

 

ಅಪ್ತಾಪ್ತೆಗೆ ಮುತ್ತು ಕೊಟ್ಟವನಿಗೆ 3 ವರ್ಷ ಜೈಲು ಶಿಕ್ಷೆ | ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು/ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತಗೆ ಮುತ್ತು ಕೊಟ್ಟವನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಪ್ರತಾಪ್ (28) ಎಂಬಾತನಿಗೆ ಕೋರ್ಟ್ ಈ ಶಿಕ್ಷೆ ನೀಡಿದೆ.

ಏನಿದು ಪ್ರಕರಣ:
2014 ರ ಅ.26 ರಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪ್ರಾಪ್ತೆಯನ್ನು (ಸಂತ್ರಸ್ತೆ) ಹಿಡಿದುಕೊಂಡಿದ್ದ ಪ್ರತಾಪ್, ಪಕ್ಕದ ಶಿಥಿಲಾವಸ್ಥೆಯ ಶೌಚಾಲಯಕ್ಕೆ ಎಳೆದೊಯ್ದಿದ್ದ. ನಾನು ನಿನ್ನ ಪ್ರೀತಿಸುತ್ತಿದ್ದು ನೀನೂ ನನ್ನ ಪ್ರೀತಿಸುತ್ತಿದ್ದೀಯಾ ಎಂದು ಪ್ರಶ್ನಿಸಿ, ಸಂತ್ರಸ್ತೆಯನ್ನು ಕಳೆಗೆ ಕೆಡೆವಿ, ಕೆನ್ನೆ ಹಾಗೂ ಕತ್ತಿನ ಭಾಗಕ್ಕೆ ಮುತ್ತಿಟ್ಟಿದ್ದ. ಎದೆ ಭಾಗವನ್ನು ಸ್ಪರ್ಶಿಸಿ, ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ. ಆತನ ಕೈಗಳಿಂದ ತಪ್ಪಿಸಿಕೊಂಡಿದ್ದ ಸಂತ್ರಸ್ತೆ ಮನೆಗೆ ಸೇರಿದ್ದಳು. ಆಕೆಯ ತಂದೆ ಚಿಕ್ಕಮಗಳೂರಿನ ಬಾಲೂರು ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ; ಈ ಗ್ರಾಮದಲ್ಲಿ ಸಂಸ್ಕೃತವೇ ಮನೆಮಾತು!; ವ್ಯಾಪಾರ ವಹಿವಾಟು, ಸಂಭಾಷಣೆ ಸಹ ಸಂಸ್ಕೃತ ಭಾಷೆಯಲ್ಲೆ; ಎಲ್ಲಿದೆ ಗೊತ್ತಾ ?

ತನಿಖೆ ನಡೆಸಿದ್ದ ಪೊಲೀಸರು, ಪೋಕ್ಸೋ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್ 357 (ಆಕ್ರಮಣ) ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತೆ, ತಂದೆ ಮತ್ತು ತಾಯಿಯ ಸಾಕ್ಷ್ಯ ಪರಸ್ಪರ ತದ್ವಿರುದ್ಧವಾಗಿದೆ. ಘಟನೆ ಭಾನುವಾರ ನಡೆದಿದೆ. ಘಟನಾ ಸ್ಥಳದ ಪಕ್ಕದಲ್ಲೇ ಕಾರ್ಮಿಕರ ಮನೆಗಳಲ್ಲಿದ್ದವು. ಸಂತ್ರಸ್ತೆಯ ಕಿರುಚಾಟ ಕೇಳಿ ಯಾರೊಬ್ಬರೂ ಸಹಾಯಕ್ಕೆ ಬಂದಿಲ್ಲ. ಹಾಗಾಗಿ, ಸಂತ್ರಸ್ತೆಯ ಸಾಕ್ಷ್ಯ ನಂಬಲಾರ್ಹವಾಗಿಲ್ಲ ಎಂದು ತೀರ್ಮಾನಿಸಿದ್ದ ಚಿಕ್ಕಮಗಳೂರು ಪೋಕ್ಸೋ ವಿಶೇಷ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿ 2017 ರ ಜ.30 ರಂದು ಆದೇಶಿಸಿತ್ತು. ಇದರಿಂದ ಪೊಲೀಸರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.