ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಮುಖ ರಸ್ತೆಗಳಲ್ಲಿ ಗುಂಡಿ ಬಿದ್ದು ಹಾಳಾಗಿದ್ದು, ಮಳೆಗಾಲ ಮುಗಿದರೂ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿಲ್ಲ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ

ಮಳೆಯಾಗುತ್ತಿರುವುದರಿಂದ ರಸ್ತೆ ಗುಂಡಿ ಮುಚ್ಚುವುದು ಕಷ್ಟವಾಗಿದೆ ಎಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೆಪ ಹೇಳುತ್ತಿದ್ದರು. ಈಗ ಮಳೆ ನಿಂತು ಹಲವು ದಿನಗಳೇ ಕಳೆದಿದ್ದು, ರಸ್ತೆ ಗುಂಡಿ ಮುಚ್ಚುವ ಕೆಲಸವನ್ನೂ ಆರಂಭಿಸಿಲ್ಲ ಎಂಬುದು ಜನರ ಅಸಮಾಧಾನ.

ಮಳೆ ಬಂದಾಗ ಗುಂಡಿಗಳ ತುಂಬಾ ನೀರು ತುಂಬಿಕೊಳ್ಳುವುದರಿಂದ ಗುಂಡಿಯಾವುದು ರಸ್ತೆಯಾವುದು ಎಂಬುದು ತಿಳಿಯದ ಸ್ಥಿತಿ ಇದ್ದು, ವಾಹನ ಸವಾರರು ಎದ್ದು ಬಿದ್ದು ಹೋಗಬೇಕಾದ ಪರಿಸ್ಥಿತಿ ಉಂಟಾಗುತ್ತಿತ್ತು. ಮಳೆ ಕಡಿಮೆಯಾದ ಕೂಡಲೇ ರಸ್ತೆ ಗುಂಡಿ ಮುಚ್ಚಲಾಗುತ್ತದೆ ಎಂದು ಹೇಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಳೆ ನಿಂತರೂ ಗುಂಡಿ ಮುಚ್ಚಲು ಕ್ರಮಕೈಗೊಂಡಿಲ್ಲ. ಇದರಿಂದ ಅಪಘಾತಕ್ಕೆ ಎಡೆ ಮಾಡಿಕೊಡುವಂತಿರುವ ರಸ್ತೆಗಳಲ್ಲಿರುವ ಗುಂಡಿ ತಪ್ಪಿಸಲು ವಾಹನ ಸವಾರರಂತೂ ಹರ ಸಾಹಸಪಡಬೇಕು.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಕೆಲವೆಡೆ ರಸ್ತೆಗಳಲ್ಲಿ ಬಿದ್ದಿದ್ದ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದರೂ ಸಹ ರಸ್ತೆಗೆ ಹಾಕಿದ ಜಲ್ಲಿಕಲ್ಲುಗಳಿಂದ ವಾಹನ ಸವಾರರು ನಿತ್ಯವೂ ಹೈರಾಣಾಗುವಂತಾಗಿದೆ. ನಿತ್ಯ ತಿರುಗಾಡುವ ನೂರಾರು ವಾಹನಗಳ ಚಾಲಕರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
ದಶಕದಿಂದ ಅನುದಾನ ಕಾಣದ ಗ್ರಾಮೀಣ ರಸ್ತೆಗಳ ಸ್ಥಿತಿಯಂತೂ ಹೇಳ ತೀರದಾಗಿದೆ. ಕನಿಷ್ಠ ರಸ್ತೆಯಲ್ಲಿನ ಗುಂಡಿ ಮುಚ್ಚುವ ಕಾರ್ಯವೂ ಮಾಡಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲೂಕುಗಳ ರಸ್ತೆಯಲ್ಲಿ ಗುಂಡಿಗಳ ಸರಮಾಲೆಯೇ ಇದೆ. ಗುಂಡಿಗಳನ್ನು ತಪ್ಪಿಸಲು ಹೋಗಿ ವಾಹನಗಳು ಮತ್ತೊಂದು ಗುಂಡಿಗೆ ಬೀಳುವ ಇಲ್ಲವೆ ಎದುರುಗಡೆ ಬರುವ ವಾಹನಗಳಿಗೆ ಡಿಕ್ಕಿ ಹೊಡೆದು ಅಪಘಾತಕ್ಕೆ ಎಡೆ ಮಾಡಿಕೊಡುವಂತೆ ಇದೆ. ಇನ್ನಾದರು ರಸ್ತೆಗಳ ಗುಂಡಿ ಮುಚ್ಚುವ ಕೆಲಸವನ್ನು ಆರಂಭಗೊಳಿಸಿ ಜನರಿಗೆ ಆಗುತ್ತಿರುವ ಸಂಚಾರ ಸಮಸ್ಯೆಯನ್ನು ನಿವಾರಿಸಬೇಕು ಎಂಬುದು ಜನರ ಒತ್ತಾಯ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ












