ಚಿಕ್ಕಮಗಳೂರು: ಕೈದಿಗಳಿಗೆ ರಾಜಾತಿಥ್ಯ: ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.


ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್‌ ಆಫರ್; ಆಕರ್ಷಕ ಸಂಬಳ


ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ, ಭಯೋತ್ಪಾದಕರು, ದೇಶದ್ರೋಹಿಗಳಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಕಲ ಸವಲತ್ತು ಪೂರೈಸಿ ರಾಜಾತಿಥ್ಯ ನೀಡುತ್ತಿದೆ. ಈ ಎಲ್ಲಾ ಸವಲತ್ತನ್ನು ಒದಗಿಸುತ್ತಿರುವ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ


ಕಾರಾಗೃಹದಲ್ಲಿ ವಿಕೃತ ಕಾಮಿ ಹಾಗೂ ಭಯೋತ್ಪಾದಕರ ಕೈನಲ್ಲಿ ಸ್ಮಾರ್ಟ್ ಪೋನ್ ದೊರಕುವಂತೆ ಮಾಡಲಾಗಿದೆ. ವಿಡಿಯೊಗಳಿಂದ ಇವು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದರು. ರಾಷ್ಟ್ರದ್ರೋಹಿಗಳ ಜೊತೆ ಕೈಜೋಡಿಸಿ, ಕೈದಿಗಳು ಐಶರಾಮಿಯಾಗಿ ಬದುಕಲು ಅವಕಾಶ ಕಲ್ಪಿಸಿಕೊಡಲಾಗಿದೆ. ಸರ್ಕಾರದ ಈ ನಡೆಯನ್ನು ಜನ ಖಂಡಿಸಬೇಕು ಎಂದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.